

ಬೆಂಗಳೂರು: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಸೋಮವಾರ ದೆಹಲಿಗೆ ಬರುವಂತೆ ಹೈಕಮಾಂಡ್ ಬುಲಾವ್ ನೀಡಿದೆ.
ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಸಂಬಂಧ ಈಗಾಗಲೇ ಇಬ್ಬರು ಪ್ರತಿನಿಧಿಗಳನ್ನು ಕಳಿಸಿ ಅಭಿಪ್ರಾಯ ಸಂಗ್ರಹಿಸಿರುವ ಎಐಸಿಸಿ, ಒಮ್ಮತ ಮೂಡಿಸಲು ಜಿ.ಪರಮೇಶ್ವರ್ ಮನೆಯಲ್ಲಿ ಹೈಕಮಾಂಡ್ ಸೂಚನೆ ಮೇರೆಗೆ ಸಭೆ ಆಯೋಜಿಸಿತ್ತು. ಆದರೆ ಒಮ್ಮತ ಮೂಡದ ಕಾರಣ ಪ್ರಮುಖ ನಾಯಕರೊಂದಿಗೆ ಕೊನೆಯ ಸುತ್ತಿನ ಅಭಿಪ್ರಾಯ ಸಂಗ್ರಹಿಸಲು ಹೈಕಮಾಂಡ್ ನಿರ್ಧರಿಸಿದೆ. ಸೋಮವಾರದ ಬಳಿಕ ರಾಜ್ಯದ ಪ್ರಮುಖ ನಾಯಕರನ್ನು ದೆಹಲಿಗೆ ಆಹ್ವಾನಿಸಲಾಗಿದೆ.