

ದುಬೈ: ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಒಂದೂ ವಿಕೆಟ್ ಕಬಳಿಸಲು ಶಕ್ತರಾಗದ ಭಾರತದ ಸ್ಟಾರ್ ವೇಗಿ ಜಸ್ಪ್ರೀತ್ ಬುಮ್ರಾ ಐಸಿಸಿ ಏಕದಿನ ಬೌಲಿಂಗ್ ರ್ಯಾಂಕಿಂಗ್ನಲ್ಲಿ ಅಗ್ರಸ್ಥಾನದಿಂದ 2ನೇ ಸ್ಥಾನಕ್ಕೆ ಕುಸಿತ ಕಂಡಿದ್ದಾರೆ.
ಗಾಯದಿಂದಾಗಿ ಸರಣಿಯಲ್ಲಿ ಆಡದ ಕಿವೀಸ್ ವೇಗಿ ಟ್ರೆಂಟ್ ಬೌಲ್ಟ್ ನೂತನ ವಿಶ್ವ ನಂ. 1 ಬೌಲರ್ ಆಗಿದ್ದಾರೆ. ಸರಣಿಯಲ್ಲಿ 6 ವಿಕೆಟ್ ಕಬಳಿಸಿದ ಲೆಗ್ ಸ್ಪಿನ್ನರ್ ಯಜುವೇಂದ್ರ ಚಾಹಲ್ 13ನೇ ಸ್ಥಾನಕ್ಕೇರಿದ್ದರೆ, ಚೈನಾಮನ್ ಬೌಲರ್ ಕುಲದೀಪ್ ಯಾದವ್ 16ನೇ ಸ್ಥಾನಕ್ಕಿಳಿದಿದ್ದಾರೆ. ಬ್ಯಾಟಿಂಗ್ ರ್ಯಾಂಕಿಂಗ್ನಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಉಪನಾಯಕ ರೋಹಿತ್ ಶರ್ಮ ಕ್ರಮವಾಗಿ ಮೊದಲೆರಡು ಸ್ಥಾನದಲ್ಲಿ ಮುಂದುವರಿದಿದ್ದಾರೆ. ಆಲ್ರೌಂಡರ್ಸ್ ರ್ಯಾಂಕಿಂಗ್ನಲ್ಲಿ ರವೀಂದ್ರ ಜಡೇಜಾ 7ನೇ ಸ್ಥಾನಕ್ಕೇರಿದ್ದಾರೆ. ವೈಟ್ವಾಷ್ ಸೋಲಿನ ನಡುವೆಯೂ ತಂಡ ರ್ಯಾಂಕಿಂಗ್ನಲ್ಲಿ ಭಾರತ 2ನೇ ಸ್ಥಾನ ಕಾಯ್ದುಕೊಂಡಿದೆ.