ಧರ್ಮಸ್ಥಳದ ಶವ ಹೂತಿಟ್ಟ ವಿವಾದಾತ್ಮಕ ಪ್ರಕರಣವು ದಿನಕ್ಕೊಂದು ಹೊಸ ಆಯಾಮವನ್ನು ಪಡೆದುಕೊಳ್ಳುತ್ತಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಪ್ರಕರಣದ ಪ್ರಮುಖ ಕೊಂಡಿಯಾಗಿರುವ ಮಾಸ್ಟ್‌ಮ್ಯಾನ್ ಚಿನ್ನಯ್ಯ, ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ (ಹೈಕೋರ್ಟ್) ರಿಟ್ ಅರ್ಜಿ ಸಲ್ಲಿಸಿದ ನಂತರ ತನಗೆ ಮತ್ತು ತನ್ನ ಕುಟುಂಬಕ್ಕೆ ಜೀವಬೆದರಿಕೆಗಳು ಬರುತ್ತಿವೆ ಎಂದು ಆರೋಪಿಸಿದ್ದಾರೆ. ತನಗಾಗುತ್ತಿರುವ ಮಾನಸಿಕ ಕಿರುಕುಳ ಮತ್ತು ಪ್ರಾಣಭಯದ ಹಿನ್ನೆಲೆಯಲ್ಲಿ, ಬೆಳ್ತಂಗಡಿಯಲ್ಲಿರುವ ವಿಶೇಷ ತನಿಖಾ ತಂಡದ (ಖಿ) ಕಚೇರಿಗೆ ಸೋಮವಾರ ಭೇಟಿ ನೀಡಿದ ಚಿನ್ನಯ್ಯ, ತನಿಖಾಧಿಕಾರಿಗಳಿಗೆ ಲಿಖಿತ ದೂರು ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಅವರ ಪತ್ನಿ ರತ್ನಾ ಕೂಡ ಜೊತೆಯಲ್ಲಿದ್ದರು.