ಕೆಂಪೇಗೌಡ ಏರ್ಪೋರ್ಟನಲ್ಲಿ ಅಪಘಾತ: ಪ್ರಯಾಣಿಕರನ್ನು ಸ್ಥಳಾಂತರಿಸುವಾಗ ಘಟನೆ, ಅದೃಷ್ಟವಶಾತ್ ಎಲ್ಲರೂ ಪಾರು

Bengaluru Airport
Published on

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಳ್ಳಂಬೆಳಗ್ಗೆ ಅಪಘಾತ ಸಂಭವಿಸಿದೆ. ಟರ್ಮಿನಲ್ 2 ರಿಂದ ಟರ್ಮಿನಲ್ 1ಕ್ಕೆ ಪ್ರಯಾಣಿಕರನ್ನು ಸ್ಥಳಾಂತರ ಮಾಡುವಾಗ ಶೇಟಲ್ ಬಸ್ ಟರ್ಮಿನಲ್​ 2 ಪಿಲ್ಲಲ್​ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿ ಹೊಡೆದ ಪರಿಣಾಮ ಬಸ್​ನಲ್ಲಿದ್ದ 15 ಪ್ರಯಾಣಿಕರು ಹಾಗೂ ಇಬ್ಬರು ಸಿಬ್ಬಂದಿಗೆ ಗಾಯಗಳಾಗಿವೆ. ಬೆಳಗ್ಗೆ 5.15ಕ್ಕೆ ಅವಘಡ ಸಂಭವಿಸಿದ್ದು ತಕ್ಷಣ ಗಾಯಾಳುಗಳನ್ನು ಏರ್ಪೋರ್ಟ್​ನಲ್ಲಿರುವ ಅಸ್ಟರ್ ಆಸ್ಪತ್ರೆಗೆ ಸಾಗಿಸಲಾಗಿದೆ. ಐದಾರು ಪ್ರಯಾಣಿಕರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿದೆ.

ಚಾಲಕನ ನಿರ್ಲಕ್ಷ್ಯದಿಂದ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬಸ್ಸಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್​ ಚಾಲಕ ರಾತ್ರಿ ಪಾಳಯದಲ್ಲಿ ಕೆಲಸ ಮಾಡುತ್ತಿದ್ದ. ಮುಂಜಾನೆ ನಿದ್ರೆಗೆ ಜಾರಿದ್ದರಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ. ಇಂದು ಮುಂಜಾನೆ ನಡೆದ ಘಟನೆಯಿಂದ ಪ್ರಯಾಣಿಕರು ಬೆಚ್ಚಿ‌ಬಿದ್ದಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net