

ಕೊಪ್ಪಳ: ಗುಳದಳ್ಳಿ ಗ್ರಾಮದ ಬಳಿ ಶುಕ್ರವಾರ ಮಧ್ಯಾಹ್ನ ಸಾರಿಗೆ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಹೊಸಪೇಟೆ ಮೂಲದವರು ಎಂದು ಗುರುತಿಸಲಾಗಿದೆ. ಯುವಕರಿಬ್ಬರು ಸಂಚರಿಸುತ್ತಿದ್ದ ಬೈಕ್ಗೆ ಗಂಗಾವತಿ-ಕೊಲ್ಹಾಪುರ ಮಾರ್ಗದ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರರಿಬ್ಬರಿಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವ ಆಗಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಸ್ಥಳಕ್ಕೆ ಮುನಿರಾಬಾದ್ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ. ಇದನ್ನೂ ಓದಿರಿ ಡೆತ್ನೋಟ್ ಬರೆದಿಟ್ಟು ಹೈಸ್ಕೂಲ್ ಶಿಕ್ಷಕ ಆತ್ಮಹತ್ಯೆ! ಸಾವಿಗೂ ಮುನ್ನ ಮನದ ದುಃಖ ಅಕ್ಷರಕ್ಕಿಳಿಸಿದ ಶಿಕ್ಷಕ