

ತೆಲಂಗಾಣ: ತೆಲಂಗಾಣದ ಮಹೆಬೂಬ್‌ನಗರ ಜಿಲ್ಲೆಯ ಜಡ್‌ಚಾರ್ಲಾ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ರಸ್ತೆ ಸಾರಿಗೆ ಸಂಸ್ಥೆ (ಆರ್‌ಟಿಸಿ) ಬಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕ್ಷಣಮಾತ್ರದಲ್ಲಿ ಬಸ್‌ಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಅಪಘಾತದಲ್ಲಿ ಕನಿಷ್ಠ ಹದಿನೈದು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ: ಸಮಾಜದ ಸಂಘಟನೆಗೆ ಆದ್ಯತೆ ನೀಡಿ
ಆಂಧ್ರಪ್ರದೇಶಕ್ಕೆ ಸೇರಿದ ಆರ್‌ಟಿಸಿ ಬಸ್ ಹೈದರಾಬಾದ್‌ನಿಂದ ಧರ್ಮಾವರಂಗೆ ತೆರಳುತ್ತಿತ್ತು. ಜಡ್ಚಾರ್ಲ ಹೊರವಲಯ ಬೂರಡ್ಡಿಪಲ್ಲಿ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಟ್ರಕ್‌ಗೆ ಡಿಕ್ಕಿಯಾದ ತಕ್ಷಣ ಬಸ್ನಲ್ಲಿ ಅಗ್ನಿ ಕಾಣಿಸಿಕೊಂಡಿದ್ದು, ಧಗಧಗನೆ ಹೊತ್ತಿ ಉರಿಯುವ ಮುನ್ನ ಪ್ರಯಾಣಿಕರು ಬಸ್ ಇಳಿದು ತಮ್ಮ ತಮ್ಮ ಜೀವ ಉಳಿಸಿಕೊಂಡಿದ್ದಾರೆ.
ಅಪಘಾತದ ವೇಳೆ ಬಸ್ನಲ್ಲಿ 36 ಮಂದಿ ಪ್ರಯಾಣಿಕರಿದ್ದರು ಎಂದು ವರದಿಯಾಗಿದೆ. ಗಾಯಾಳುಗಳನ್ನು ಜಡಚರ್ಲಾ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಹಬೂಬನಗರ ಜನರಲ್ ಆಸ್ಪತ್ರೆಗೆ ರವಾನಿಸಲಾಗಿದೆ,(ಏಜೆನ್ಸೀಸ್)