ಟ್ರ್ಯಾಕ್ಟರ್ ಟ್ರಾಲಿಗೆ ಬಸ್ ಡಿಕ್ಕಿ! ಸ್ಥಳದಲ್ಲೇ 6 ಮಂದಿ ದುರ್ಮರಣ

Untitled design - 2024-02-26T085917.159
Published on

ಉತ್ತರ ಪ್ರದೇಶ: ಟ್ರಾಕ್ಟರ್ ಟ್ರಾಲಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಆರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಉಳಿದು ಆರು ಮಂದಿ ಗಂಭೀರವಾಗಿ ಗಾಯಗೊಂಡಿ ಘಟನೆ ಉತ್ತರ ಪ್ರದೇಶದ ಜೌನ್‌ಪುರ ಜಿಲ್ಲೆಯಲ್ಲಿ ವರದಿಯಾಗಿದೆ. ಯುಪಿಯ ರೋಡ್‌ವೇಸ್ ಬಸ್ ಪ್ರಯಾಗ್‌ರಾಜ್‌ನಿಂದ ಜಾನ್‌ಪುರಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಭಾನುವಾರ (ಫೆ.25) ರಾತ್ರಿ 11.15ರ ಸುಮಾರಿಗೆ ಸಮದ್‌ಗಂಜ್ ಬಳಿ ಅಪಘಾತ ಸಂಭವಿಸಿದೆ. ಪೊಲೀಸರ ಪ್ರಕಾರ, ಆರು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ವೇಳೆ ಟ್ರ್ಯಾಕ್ಟರ್ ಟ್ರಾಲಿಯಲ್ಲಿ 12 ಕಾರ್ಮಿಕರು ಪ್ರಯಾಣಿಸುತ್ತಿದ್ದರು. ಸಂತ್ರಸ್ತರೆಲ್ಲರೂ ಅಲಿಶಾಪುರ ಗ್ರಾಮದವರು ಎಂದು ಹೇಳಲಾಗಿದೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ತಕ್ಷಣವೇ ಸ್ಥಳಕ್ಕೆ ಧಾವಿಸಿ ಗಾಯಗೊಂಡ ಎಲ್ಲಾ ಕಾರ್ಮಿಕರನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿ ತಿಳಿಸಿದೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net