ಕಮರಿಗೆ ಉರುಳಿದ ಬಸ್​; ಅಪಘಾತದಲ್ಲಿ ನಾಲ್ವರು ಮೃತ್ಯು!

Untitled design (17)
Published on

ಆಂಧ್ರಪ್ರದೇಶ: ಆಂಧ್ರಪ್ರದೇಶದ ಅಲ್ಲೂರಿನಲ್ಲಿ ಹಲವಾರು ಪ್ರಯಾಣಿಕರನ್ನು ಒಳಗೊಂಡಿದ್ದ ಬಸ್ ಕಮರಿಗೆ ಉರುಳಿ ಬಿದ್ದ ಪರಿಣಾಮ ಘಟನೆಯಲ್ಲಿ 4 ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಭಾನುವಾರ (ಆಗಸ್ಟ್​ 20) ಆಂಧ್ರಪ್ರದೇಶದ ಅಲ್ಲೂರಿ ಜಿಲ್ಲೆಯ, ಪಾಡೇರು ಘಾಟ್​ ರಸ್ತೆಯಲ್ಲಿ ಹೋಗುತ್ತಿದ್ದ ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ, ಕಮರಿಗೆ ಉರುಳಿ ಬಿದ್ದಿದೆ. ಈ ವೇಳೆ ಬಸ್​ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ ಎಂದು ವರದಿ ತಿಳಿಸಿದೆ.

ಪಾಡೇರು ಘಾಟ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಆರ್​​ಟಿಸಿ ಬಸ್​ನಲ್ಲಿ ಸುಮಾರು 60 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಬಸ್ ಚೋಡವರಂಗೆ ತೆರಳುತ್ತಿತ್ತು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net