ಬಸ್ ಪಲ್ಟಿಯಾಗಿ ಬಾಲಕ ಸಾವು

bus accident
ಚಿಕ್ಕಮಗಳೂರು ತಾಲೂಕಿನ ದತ್ತಪೀಠ ಹಾಗೂ ಮಾಣಿಕ್ಯಧಾರ ನಡುವೆ ಪ್ರವಾಸಿ ಬಸ್ ಪ್ರಪಾತಕ್ಕೆ ಉರುಳಿರುವುದು.
Published on

ಚಿಕ್ಕಮಗಳೂರು: ತಾಲೂಕಿನ ಚಂದ್ರದ್ರೋಣ ಪರ್ವತ ಶ್ರೇಣಿಯ ದತ್ತಪೀಠ ಹಾಗೂ ಮಾಣಿಕ್ಯಧಾರಾ ನಡುವೆ ಭಾನುವಾರ ಪ್ರವಾಸಿ ಬಸ್ ಪಲ್ಟಿಯಾಗಿ ಬಾಲಕನೋರ್ವ ಮೃತಪಟ್ಟು 25ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ತುಮಕೂರು ಜಿಲ್ಲೆ ಶಿರಾ ಹಾಗೂ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಅಡಿವಾಳ ಗ್ರಾಮದ ಸಂಬಂಧಿಕರು ಸೇರಿ ಬಸ್ ಮಾಡಿಕೊಂಡು ಪ್ರವಾಸಕ್ಕೆಂದು ಚಿಕ್ಕಮಗಳೂರಿಗೆ ಬಂದಿದ್ದರು. ಪ್ರವಾಸ ಮುಗಿಸಿ ವಾಪಸ್ ಬರುವಾಗ ಬಸ್ ಚಾಲಕನ ನಿಯಂತ್ರಣ ತಪ್ಪಿ ನೂರು ಅಡಿ ಆಳದ ಪ್ರಪಾತಕ್ಕೆ ಉರುಳಿದ ಪರಿಣಾಮ ದುರ್ಘಟನೆ ನಡೆದಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಿರಾ ಮೂಲದ ಬಾಲಕ ನವಾಜ್ (6) ಮೃತಪಟ್ಟಿದ್ದಾನೆ. 25ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದು ಎಲ್ಲರನ್ನೂ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಬಸ್ಸಿನಲ್ಲಿ 35 ಪ್ರಯಾಣಿಕರಿದ್ದು 10 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net