ನದಿಗೆ ಉರುಳಿಬಿದ್ದ ಬಸ್​! 14 ಪ್ರಯಾಣಿಕರು ದುರ್ಮರಣ

ವಿಜಯವಾಣಿ - 2024-08-23T125732.648
Published on

ನೇಪಾಳ: ಭಾರತೀಯರು ಪ್ರಯಾಣಿಸುತ್ತಿದ್ದ ಬಸ್​ವೊಂದು ನದಿಗೆ ಉರುಳಿಬಿದ್ದ ಪರಿಣಾಮ 14 ಮಂದಿ ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ನೇಪಾಳದ ತನಾಹುನ್​ ಜಿಲ್ಲೆಯಲ್ಲಿ ಸಂಭವಿಸಿದೆ.

ಭಾರತೀಯ ಪ್ರಯಾಣಿಕರಿದ್ದ ಬಸ್ ಮರ್ಸ್ಯಾಂಗ್ಡಿ ನದಿಗೆ ಉರುಳಿಬಿದ್ದಿದ್ದು, 14 ಜನರು ಸಾವಿಗೀಡಾಗಿದ್ದಾರೆ. ಅಪಘಾತದ ತೀವ್ರತೆಗೆ 16 ಮಂದಿ ಗಂಭೀರ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆ ಕೊಡಿಸಲಾಗಿದೆ.

ಆಕ್ಸಿಡೆಂಟ್​ಗೆ ತುತ್ತಾದ ಬಸ್​ 40 ಭಾರತೀಯ ಪ್ರಯಾಣಿಕರನ್ನು ಕೊಂಡೊಯ್ಯುತ್ತಿತ್ತು ಎಂದು ವರದಿಯಾಗಿದೆ. ಯುಪಿ ಎಫ್‌ಟಿ 7623 ನಂಬರ್ ಪ್ಲೇಟ್ ಹೊಂದಿದ್ದ ಬಸ್​ ಪೋಖರಾದಿಂದ ಕಠ್ಮಂಡುವಿಗೆ ತೆರಳುತ್ತಿತ್ತು ಎಂದು ತನಾಹುನ್ ಜಿಲ್ಲೆಯ ಡಿಎಸ್‌ಪಿ ದೀಪ್‌ಕುಮಾರ್ ರಾಯಾ ಮಾಹಿತಿ ಹಂಚಿಕೊಂಡಿದ್ದಾರೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net