ಕಲ್ಯಾಣ ಕರ್ನಾಟಕ ಭಾಗಕ್ಕೆ ಬುಧವಾರದಿಂದ ಬಸ್ ಸಂಚಾರ

KSRTC
Published on

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗಕ್ಕೆ ಬುಧವಾರದಿಂದ ಬಸ್ ಸಂಚಾರ ಸೇವೆ ಆರಂಭವಾಗಲಿವೆ ಎಂದು ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದರು.

ಬುಧವಾರ ಬೆಳಗ್ಗೆ 7 ರಿಂದ ಬಸ್ ಸಂಚಾರ ಆರಂಭವಾಗಲಿದೆ. ಸಂಜೆ 7ರ ಒಳಗೆ ತಲುಪುವ ರೀತಿ ವ್ಯವಸ್ಥೆ ಮಾಡಲಾಗಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.

ಮಂಗಳವಾರ ಎಲ್ಲ ಕಡೆಗಳಿಂದ ಮಾಹಿತಿ ತೆಗೆದುಕೊಳ್ಳಲಾಗಿದೆ. ನಿಗದಿತ ವೇಳೆಗೆ ಬಸ್ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂದರು.

ಇದಕ್ಕೆ ಮುನ್ನ ಮಂಗಳವಾರದಿಂದ ರಾಜ್ಯ ಸರ್ಕಾರ ರಾಜ್ಯದಾದ್ಯಂತ ಸರ್ಕಾರಿ ಬಸ್ ಸೇವೆಯನ್ನು ಪುನರಾರಂಭಿಸಿತು. ಸರಿಯಾದ ಮಾರ್ಗಸೂಚಿ ಇಲ್ಲದ್ದರಿಂದ ಗೊಂದಲ ಉಂಟಾಗಿ ಪ್ರಯಾಣಿಕರು ಪರದಾಡಬೇಕಾಯಿತು. ಈ ಹಿನ್ನೆಲೆಯಲ್ಲಿ ಈಗ ಸಚಿವರು ಮತ್ತು ಅಧಿಕಾರಿಗಳು ಎಚ್ಚೆತ್ತು ಮೊದಲೇ ಸಮಯ ನಿಗದಿಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net