ಹಸಿರು ಜಿಲ್ಲೆಗಳಲ್ಲಿ ಬಸ್ ಸಂಚಾರ ಶುರು

page 7 12
Published on

ಬೆಂಗಳೂರು: ಒಂದೂವರೆ ತಿಂಗಳಿನಿಂದ ಸ್ಥಗಿತಗೊಂಡಿದ್ದ ಕೆಎಸ್​ಆರ್​ಟಿಸಿ ಬಸ್ ಸಂಚಾರ ಹಸಿರು ವಲಯದ ಜಿಲ್ಲೆಗಳಲ್ಲಿ ಸೋಮವಾರ ಆರಂಭವಾಗುತ್ತಿದೆ. ಆದರೆ ಯಾವುದೇ ಕಾರಣಕ್ಕೂ ಅಂತರ್​ಜಿಲ್ಲಾ ಸೇವೆ ಇರುವುದಿಲ್ಲ. ಕೇಸರಿ ವಲಯದ ಜಿಲ್ಲೆಗಳಲ್ಲಿ ಬಸ್ ಸೇವೆ ನೀಡುವ ಕುರಿತು ಈವರೆಗೆ ನಿರ್ಧರಿಸಿಲ್ಲ. ಬಸ್​ನಲ್ಲಿ ಯಾರು ಬೇಕಾದರೂ ಸಂಚರಿಸಬಹುದು. ಆದರೆ, ಪ್ರಯಾಣಿಕರು ಬಸ್ ಹತ್ತುವಾಗ, ಒಳಗೆ ಕುಳಿತುಕೊಂಡ ನಂತರ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಕಡ್ಡಾಯ. ಪ್ರಯಾಣಿಕರ ಸಂಖ್ಯೆ ಆಧರಿಸಿ ಬಸ್ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತದೆ.

ಯಾವೆಲ್ಲ ಜಿಲ್ಲೆಗಳಲ್ಲಿ ಸಂಚಾರ: ದಾವಣಗೆರೆ, ಉಡುಪಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಹಾವೇರಿ, ಕೊಡಗು, ಕೋಲಾರ, ಕೊಪ್ಪಳ, ರಾಯಚೂರು, ಶಿವಮೊಗ್ಗ, ರಾಮನಗರ ಮತ್ತು ಯಾದಗಿರಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net