ಬಸ್​ ಪ್ರಯಾಣ ದರ ಏರಿಕೆ ಖಂಡಿಸಿ ಜೆಡಿಎಸ್​ ಪ್ರತಿಭಟನೆ

8-RNR-01
Published on

ರಾಣೆಬೆನ್ನೂರ: ರಾಜ್ಯ ಸರ್ಕಾರ ಬಸ್​ ಪ್ರಯಾಣ ದರ ಏರಿಕೆ ಮಾಡಿರುವುದನ್ನು ಖಂಡಿಸಿ ಜೆಡಿಎಸ್​ ಜಿಲ್ಲಾ ಹಾಗೂ ತಾಲೂಕು ಘಟಕದ ವತಿಯಿಂದ ನಗರದ ಮಿನಿ ವಿಧಾನಸೌಧ ಎದುರು ಬುಧವಾರ ಪ್ರತಿಭಟನೆ ನಡೆಸಲಾಯಿತು.

ರಾಜ್ಯ ಕಾಂಗ್ರೆಸ್​ ಸರ್ಕಾರ, ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿರುದ್ಧ ಘೋಷಣೆ ಕೂಗಿದರು. ಕೂಡಲೇ ರಾಜ್ಯ ಸರ್ಕಾರ ಬಸ್​ ದರ ಏರಿಕೆ ಮಾಡಿರುವುದನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಜಿಲ್ಲಾಧ್ಯಕ್ಷ ಮಂಜುನಾಥ ಗೌಡಶಿವಣ್ಣನವರ ಮಾತನಾಡಿ, ರಾಜ್ಯ ಸರ್ಕಾರ ಮಹಿಳೆಯರಿಗೆ ಬಸ್​ ಉಚಿತ ಎಂದು ಹೇಳಿ ಪುರುಷರಿಂದ ಆ ಹಣ ವಸೂಲಿ ಮಾಡಲು ಮುಂದಾಗಿದೆ. ಅದಕ್ಕಾಗಿ ಬಸ್​ ದರ ಶೇ.15ರಷ್ಟು ಹೆಚ್ಚಳ ಮಾಡಿದೆ.

ಇದರಿಂದ ಸಾಮಾನ್ಯ ಜನರಿಗೆ ತೊಂದರೆ ಉಂಟಾಗಿದೆ. ಸರ್ಕಾರ ಕೂಡಲೇ ಬಸ್​ ದರ ಏರಿಕೆ ಮಾಡಿರುವುದನ್ನು ಹಿಂಪಡೆಯಬೇಕು. ಇಲ್ಲವಾದರೆ ಮುಂದಿನ ದಿನದಲ್ಲಿ ತೀವ್ರತರನಾದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು. ಗ್ರೇಡ್​&-2 ತಹಸೀಲ್ದಾರ್​ ಅರುಣ ಕಾರಗಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಪಕ್ಷದ ರಾಜ್ಯ ವಕ್ತಾರ ಮಹೇಶಗೌಡ, ಚಂದ್ರಗೌಡ ಭರಮಗೌಡ್ರ, ರಮೇಶ ಮಾಕನೂರ, ಸಿದ್ದಣ್ಣ ಗುಡಿಮುದ್ಲಲರ, ವಿಠ್ಠಲ ಸುಣಗಾರ, ನಿಂಗಣ್ಣ ಸಣ್ಣಪುಟ್ಟಪ್ಪನವರ, ಪವನ ಗಾಣಗೇರ, ದಾವಲಮಲ್ಲಿಕ ನದಾಫ, ಇಬ್ರಾಹಿಂ ಯಲಗಚ್ಚಿ, ರಮೇಶ ಪೂಜಾರ, ರವೀಂದ್ರ ಶಿವಪ್ಪನವರ, ಐಶ್ವರ್ಯ ಮಡಿವಾಳರ, ಶೈನಾ ಭಾನು, ರೂಪಾ ದಳವಾಯಿ, ನಾಗನಗೌಡ ಲಕ್ಕನಗೌಡ್ರ ಮತ್ತಿತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net