ಸಾರ್ವಜನಿಕ ದೂರುಗಳಿಗೆ ತ್ವರಿತವಾಗಿ ಸ್ಪಂದಿಸಿ; ಜಲಮಂಡಳಿ ಅಧ್ಯಕ್ಷರ ಸೂಚನೆ

bwssb
Published on

ಬೆಂಗಳೂರು: ಮಳೆಯಿಂದಾಗಿ ಹಾಗೂ ನೀರು ಸರಬರಾಜಿನ ಸಂದರ್ಭದಲ್ಲಿ ಉದ್ಭವಿಸುವ ಸಾರ್ವಜನಿಕ ಸಮಸ್ಯೆಗಳು ತ್ವರಿತವಾಗಿ ಪರಿಹಾರವಾಗಬೇಕು. ಇದಕ್ಕಾಗಿ ಜನರ ಬಳಿ ತೆರಳಿ ದೂರುಗಳನ್ನು ಆಲಿಸಬೇಕು ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್​ಪ್ರಸಾತ್​ ಮನೋಹರ್​ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರು ಜಲಮಂಡಳಿ ಕೇಂದ್ರ ಕಚೇರಿಯಲ್ಲಿ ಅಧಿಕಾರಿಗಳು ಹಾಗೂ ಇಂಜಿನಿಯರ್​ಗಳೊಂದಿಗೆ ಸೋಮವಾರ ಸಭೆ ನಡೆಸಿ ಸೂಚನೆ ನೀಡಿದರು.

ಕಾವೇರಿ 5ನೇ ಹಂತದ ಯೋಜನೆಯ ಪರಿಶೀಲನೆಗಾಗಿ ಜೂನ್​ ಮೊದಲ ವಾರ ನಗರದಾದ್ಯಂತ ಕಾವೇರಿ ನೀರು ಪೂರೈಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಆ ನಂತರ ನಗರದ ಕೆಲವು ಪ್ರದೇಶಗಳಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಅಲ್ಲದೇ, ಮಳೆನೀರಿನಿಂದಾಗಿ ಒಳಚರಂಡಿ ಉಕ್ಕಿ ಹರಿಯುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ. ಇವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಿಯಾಶೀಲರಾಗಬೇಕು.

ಆಯಾ ವಲಯದ ಮುಖ್ಯ ಇಂಜಿನಿಯರ್​ ತಮ್ಮ ಅಧೀನ ಅಧಿಕಾರಿಗಳೊಂದಿಗೆ ಸೇರಿ ತಂಡ ಕಟ್ಟಿಕೊಳ್ಳಿ. ನಗರದಲ್ಲಿರುವ 143 ಸೇವಾ ಕೇಂದ್ರಗಳ ವ್ಯಾಪ್ತಿಯಲ್ಲಿ ಬರುವಂತಹ ದೂರುಗಳನ್ನು ಖುದ್ದಾಗಿ ಹಿರಿಯ ಅಧಿಕಾರಿಗಳು ಪರಿಹರಿಸಬೇಕು. ವಾರ್ಡ್​ಗಳು ಹಾಗೂ ರಸ್ತೆಗಳ ವ್ಯಾಪ್ತಿಯಲ್ಲಿ ನೀರು ಸರಬರಾಜು ಆಗುತ್ತಿಲ್ಲ ಎನ್ನುವ ದೂರುಗಳು ಮರುಕಳಿಸದಂತೆ ಹಾಗೂ ಒಳಚರಂಡಿ ನೀರು ಹೊರಗಡೆ ಹರಿಯದಂತೆ ಕ್ರಮ ವಹಿಸಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net