

ಬೆಂಗಳೂರು: ವಿಧಾನಸಭೆಯ ಮೂರು ಕ್ಷೇತ್ರಗಳ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಎರಡನೇ ದಿನವಾದ ಶನಿವಾರ ಇಬ್ಬರು ಅಭ್ಯರ್ಥಿಗಳು ತಲಾ ಒಂದು ನಾಮಪತ್ರ ಸಲ್ಲಿಸಿದ್ದಾರೆ.
ಶಿಗ್ಗಾವಿಯಲ್ಲಿ ಒಂದು, ಚನ್ನಪಟ್ಟಣದಲ್ಲಿ ಒಂದು ನಾಮಪತ್ರ ಸಲ್ಲಿಕೆಯಾಗಿವೆ. ಶುಕ್ರವಾರ ಶಿಗ್ಗಾವಿಯಲ್ಲಿ ಮಾತ್ರ ಮಾನ್ಯತೆ ಪಡೆದ ನೋಂದಾಯಿತ ರಾಜಕೀಯ ಪಕ್ಷಗಳಿಂದ 3 ಅಭ್ಯರ್ಥಿಗಳು 4 ನಾಮಪತ್ರ ಸಲ್ಲಿಸಿದ್ದರು. ಶಿಗ್ಗಾವಿ, ಸಂಡೂರು, ಚನ್ನಪಟ್ಟಣ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದ್ದು, ನವೆಂಬರ್ 13 ರಂದು ಚುನಾವಣೆ ನಡೆಯಲಿದೆ.