ದ್ವೇಷ ರಾಜಕಾರಣದೊಂದಿಗೆ ಕಾಂಗ್ರೆಸ್ ಆಡಳಿತ ಆರಂಭಿಸಿದೆ: ವಿಜಯೇಂದ್ರ

Vijayendra
Published on

ಬೆಂಗಳೂರು: ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್​ನವರು ನಾಡಿನ ಜನರಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಅಪೇಕ್ಷೆಗಳು ಸಾಕಷ್ಟಿವೆ. ಘೋಷಿಸಿರುವ ಭರವಸೆಗಳನ್ನು ಕಾಂಗ್ರೆಸ್ ಈಡೇರಿಸುತ್ತದೆ ಎಂದು ಜನರು ಕಾಯುತ್ತಿದ್ದಾರೆ. ತಡವಾಗಿಯಾದರೂ ಸಂಪೂರ್ಣ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿರುವುದು ಸಂತೋಷ ಎಂದು ಶಾಸಕ ಬಿ.ವೈ.ವಿಜಯೇಂದ್ರ ಹೇಳಿದರು.

ಕೇಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಮೊದಲ‌ ಕ್ಯಾಬಿನೆಟ್ ಸಭೆಯಲ್ಲೇ ಗ್ಯಾರಂಟಿ ಕಾರ್ಡುಗಳನ್ನು ಅನುಷ್ಟಾನ ಮಾಡುವುದಾಗಿ ಕಾಂಗ್ರೆಸ್ ಹೇಳಿತ್ತು. ಇದೀಗ ಗ್ಯಾರಂಟಿ ಯೋಜನೆಗಳ ಬಗ್ಗೆ ರಾಜ್ಯಾದ್ಯಂತ ಜನರಲ್ಲಿ ಗೊಂದಲ ಉಂಟಾಗಿದೆ. ಜನರಿಗೆ ನೀಡಿರುವ ಆಶ್ವಾಸನೆಗಳನ್ನು ಕೂಡಲೇ ಈಡೇರಿಸಬೇಕು ಎಂದು ಆಗ್ರಹಿಸಿದರು.

ಆಡಳಿತ ಸರ್ಕಾರದ ವಿರುದ್ದ ಕಿಡಿಕಾರಿದ ವಿಜಯೇಂದ್ರ, ದ್ವೇಷ ರಾಜಕಾರಣದ ಮೂಲಕ ಕಾಂಗ್ರೆಸ್ ಸರ್ಕಾರದ ಆಡಳಿತದ ಆರಂಭ ಆಗುತ್ತಿದೆ. ಮಾಜಿ ಸಚಿವ ಅಶ್ವತ್ಥನಾರಾಯಣ್ ಹಾಗೂ ಶಾಸಕ ಹರೀಶ್ ಪೂಂಜಾ ವಿರುದ್ದ ಎಫ್ಐ ಆರ್ ದಾಖಲಾಗಿದೆ. ಪ್ರವೀಣ್ ನೆಟ್ಟಾರ್ ಅವರ ಪತ್ನಿಗೆ ಅನುಕಂಪದ ಆಧಾರದ ಮೇಲೆ ನೀಡಿದ್ದ ಕೆಲಸವನ್ನು ಕಿತ್ತುಕೊಂಡಿದೆ. ಕೀಳು ಮಟ್ಟಕ್ಕೆ ಸರ್ಕಾರ ಇಳಿಯುತ್ತ ಎಂಬ ನೀರಿಕ್ಷೆ ಮಾಡಿರಲಿಲ್ಲ. ಬರುವಂತಹ ದಿನಗಳಲ್ಲಿ ಈ ಬಗ್ಗೆ ಎಲ್ಲವನ್ನೂ ಪ್ರಶ್ನೆ ಮಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: VIDEO | ಪಟ್ಟದಕಲ್ಲಿನಲ್ಲಿದೆ ಪುರಾತನ ಕಾಲದ ಸೆಂಗೋಲ್​ನ ಪ್ರತಿರೂಪ!

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net