ಒಂದು ದೇಶ-ಒಂದು ಚುನಾವಣೆ; ಉತ್ತಮ ರಾಷ್ಟ್ರದ ಶ್ರೇಷ್ಠ ಕಲ್ಪನೆ: ಬಿ.ವೈ. ವಿಜಯೇಂದ್ರ

ವಿಜಯವಾಣಿ - 2025-02-06T160147.458
Published on

ಬೆಂಗಳೂರು: ಪಕ್ಷದ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಆಯೋಜಿಸಿದ್ದ ಒಂದು ದೇಶ - ಒಂದು ಚುನಾವಣೆ ಕುರಿತ ವಿಶೇಷ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ದೇಶದ ನಾಗರೀಕರ ಬಹು ವರ್ಷಗಳ ಆಶಯ ಹಾಗೂ ಪ್ರಜಾಪ್ರಭುತ್ವದ ಮೌಲ್ಯ ಹೆಚ್ಚಿಸಿ, ಸುಭದ್ರ ಭಾರತ ಕಟ್ಟುವ ನಿಟ್ಟಿನಲ್ಲಿ ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಜಾರಿಗೊಳಿಸಿದೆ.

"ಏಕಕಾಲದಲ್ಲಿ ಚುನಾವಣೆ ನಡೆಯುವುದರಿಂದ ಚುನಾವಣಾ ವೆಚ್ಚದಲ್ಲಿ ಭಾರಿ ಇಳಿಕೆಯಾಗಲಿದ್ದು, ಸರ್ಕಾರಿ ನೌಕರರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜನೆ ಮಾಡುವುದು ಕಡಿಮೆಯಾಗುತ್ತದೆ. ರಾಜಕೀಯ ಪಕ್ಷಗಳೂ ಚುನಾವಣೆ ಬಿಟ್ಟು, ಆಡಳಿತದತ್ತ ಗಮನಕೊಡಲು ಸಾಧ್ಯವಾಗುತ್ತದೆ. ಪದೇ ಪದೇ ಚುನಾವಣೆ ನಡೆಯುವುದರಿಂದ ಜನರಿಗೆ ಆಗುವ ತೊಂದರೆಗಳ ನಿವಾರಣೆ ಸೇರಿದಂತೆ ಆಡಳಿತಾತ್ಮಕ ಮತ್ತು ಭದ್ರತಾ ಪಡೆಗಳ ಮೇಲಿನ ಹೊರೆಯನ್ನು ಕಡಿಮೆ ಮಾಡುತ್ತದೆ. ಈ ಕುರಿತು ಎಲ್ಲೆಡೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕೆಂಬ ಸಂಕಲ್ಪ ಮಾಡಲಾಯಿತು" ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್‌ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಮಾಳವಿಕ, ರಾಜ್ಯ ಮುಖ್ಯ ವಕ್ತಾರರಾದ ಅಶ್ವತ್ಥ ನಾರಾಯಣ್, ವಿಧಾನ ಪರಿಷತ್‌ ಸದಸ್ಯರಾದ ಕೆ.ಎಸ್.‌ ನವೀನ್‌, ಪ್ರಕೋಷ್ಠಗಳ ರಾಜ್ಯ ಸಂಚಾಲಕರಾದ ದತ್ತಾತ್ರಿ, ರಾಜ್ಯ ಕಾರ್ಯದರ್ಶಿಗಳಾದ ತಮ್ಮೇಶ್‌ ಗೌಡ, ಶರಣು ತಳ್ಳೀಕೇರಿ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಹಾಗೂ ಪ್ರಮುಖರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net