

ರಾಣೆಬೆನ್ನೂರ: ರಾಣೆಬೆನ್ನೂರ ತಾಲೂಕಿನ ಬ್ಯಾಡಗಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿ ಈಗಾಗಲೇ 5 ಕೋಟಿ ರೂ. ಅನುದಾನ ನೀಡಲಾಗಿದೆ. ಗ್ರಾಮೀಣರ ಬೇಡಿಕೆಗೆ ಅನುಗುಣವಾಗಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
ತಾಲೂಕಿನ ಕಾಕೋಳ ಗ್ರಾಮದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಪಂ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಡಿಯಲ್ಲಿ ನಿಮಿರ್ಸಿರುವ ಸಾರ್ವಜನಿಕ ಸಮುದಾಯ ಭವನ ಉದ್ಘಾಟನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಕ್ಷೇತ್ರದ ಅಭಿವೃದ್ದಿಗೆ ನಾನು ಈಗಾಗಲೇ ಬಹಳಷ್ಟು ಹಣ ಬಿಡುಗಡೆ ಮಾಡಿಸಿಕೊಂಡು ಬಂದಿದ್ದೇನೆ. ಆದರೆ, ಇದನ್ನು ಕಾಣದ ಕೆಲವರು ವಿನಾಕಾರಣ ನನ್ನ ಕ್ಷೇತ್ರದ ಗ್ರಾಮಗಳಲ್ಲಿ ಅಭಿವೃದ್ಧಿ ಮಾಡುತ್ತಿಲ್ಲ ಎಂದು ಆರೋಪ ಮಾಡುತ್ತಿದ್ದಾರೆ. ಅಂತವರಿಗೆ ಇಂತಹ ಕಾರ್ಯಕ್ರಮ ಮಾಡುವ ಮೂಲಕ ಅಭಿವೃದ್ಧಿ ತೋರಿಸಬೇಕಾಗಿದೆ ಎಂದರು.
ಗ್ರಾಪಂ ಅಧ್ಯಕ್ಷೆ ಶಾಂತಾ ಕಿವುಡನವರ, ಉಪಾಧ್ಯಕ್ಷೆ ಶಾಂತವ್ವ ಕೆ., ನಂದಾ ಕೊಂಬಳಿ, ಶಾಂತಪ್ಪ ಸಾಹುಕಾರ, ಕರಿಯಪ್ಪ ಕುದರಿಹಾಳ, ಮಾಲತೇಶ ಕುದರಿಹಾಳ, ರಮೇಶ ಲಮಾಣಿ, ಎಚ್.ಎಂ. ನಾಯಕ, ಅಂದಾನೆಪ್ಪ ಅಸುಂಡಿ, ಶಿವಶಂಕರಪ್ಪ ಕುದರಿಹಾಳ, ಶಿವಪುತ್ರಪ್ಪ ಕೊಂಬಳಿ ಮತ್ತಿತರರು ಉಪಸ್ಥಿತರಿದ್ದರು.