ಬೈಕ್ ಸವಾರರು ಹೆಲ್ಮೆಟ್ ಧರಿಸಿ

17NGD1
Published on

ನಂಜನಗೂಡು: ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ಸಂಚಾರ ಪೊಲೀಸ್ ಠಾಣೆ ವತಿಯಿಂದ ಬುಧವಾರ ಜಾಗೃತಿ ಜಾಥಾ ನಡೆಯಿತು.


ನಗರದ ಹುಲ್ಲಹಳ್ಳಿ ವೃತ್ತದಲ್ಲಿ ನಂಜನಗೂಡು ಉಪವಿಭಾಗದ ಡಿವೈಎಸ್ಪಿ ಗೋವಿಂದರಾಜು ಜಾಥಾಗೆ ಚಾಲನೆ ನೀಡಿದರು. ಎಂಜಿಎಸ್ ರಸ್ತೆ, ರಾಷ್ಟ್ರಪತಿ ರಸ್ತೆ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದ ಜಾಥಾದಲ್ಲಿ ವಿದ್ಯಾರ್ಥಿಗಳು ಸಂಚಾರ ನಿಯಮಗಳ ಪಾಲನೆ ಕುರಿತು ಅರಿವು ಮೂಡಿಸುವ ಭಿತ್ತಿ ಫಲಕಗಳನ್ನು ಹಿಡಿದು ಸಾಗಿದರು.


ಡಿವೈಎಸ್ಪಿ ಗೋವಿಂದರಾಜು ಮಾತನಾಡಿ, ಸಂಚಾರ ನಿಯಮಗಳನ್ನು ಸವಾರರು ಕಡ್ಡಾಯವಾಗಿ ಪಾಲಿಸುವ ಮೂಲಕ ಅಪಘಾತಗಳನ್ನು ತಪ್ಪಿಸಬೇಕು. ಬೈಕ್ ಸವಾರರು ಸಂಭವಿಸಬಹುದಾದ ಅವಘಡಗಳಿಂದ ಪಾರಾಗಲು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಸುಗಮ ಸಂಚಾರಕ್ಕಾಗಿ ಸಂಚಾರ ಠಾಣೆ ಪೊಲೀಸರು ನೀಡುವ ಸೂಚನೆಗಳನ್ನು ಸಾರ್ವಜನಿಕರು, ವಾಹನ ಸವಾರರು ಪಾಲಿಸಬೇಕು. ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ನಿಯಮ ಉಲ್ಲಂಘಿಸಿದ ಸವಾರರಿಗೆ ಪೊಲೀಸರು ದಂಡ ವಿಧಿಸುತ್ತಾರೆ. ಹಾಗಾಗಿ, ನಿಯಮಗಳನ್ನು ಉಲ್ಲಂಘಿಸದೆ ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಹೇಳಿದರು.


ಪಟ್ಟಣ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಬಸವರಾಜು, ಸಂಚಾರ ಠಾಣೆ ಪಿಎಸ್‌ಐ ಜಯಪ್ರಕಾಶ್, ಅಪರಾಧ ವಿಭಾಗದ ಪಿಎಸ್‌ಐ ಪ್ರಕಾಶ್, ಎಎಸ್‌ಐ ವಸಂತಕುಮಾರ್ ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net