ಉಪಚುನಾವಣೆ ಫಲಿತಾಂಶ: 11 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ INDIA ಮೈತ್ರಿಕೂಟ!

ವಿಜಯವಾಣಿ-5-1
Published on

ನವದೆಹಲಿ: ಏಳು ರಾಜ್ಯಗಳ 13 ವಿಧಾನಸಭಾ ಸ್ಥಾನಗಳ ಉಪಚುನಾವಣೆ ರಿಸಲ್ಟ್​ ಇಂದು ಪ್ರಕಟವಾಗಲಿದೆ. ಮಧ್ಯಪ್ರದೇಶ, ತಮಿಳುನಾಡು, ಪಂಜಾಬ್, ಪಶ್ಚಿಮ ಬಂಗಾಳ, ಬಿಹಾರ, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದ ಕ್ಷೇತ್ರಗಳು ಸೇರಿದಂತೆ ಒಟ್ಟು 7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದೆ. ಈ ಪೈಕಿ 11 ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಮುನ್ನಡೆ ಸಾಧಿಸಿದ್ದು, ಆಮ್ ಆದ್ಮಿ ಪಕ್ಷದ ಮೊಹಿಂದರ್ ಭಗತ್ ಜಲಂಧರ್ ಪಂಜಾಬ್​ನ ಪಶ್ಚಿಮದಲ್ಲಿ ಗೆಲುವು ಸಾಧಿಸಿದ್ದಾರೆ.

7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಗೆ ವೋಟಿಂಗ್ ನಡೆದಿತ್ತು. ಇಂದು ಮತ ಎಣಿಕೆ ನಡೆಯುತ್ತಿದ್ದು, ಸದ್ಯದ ಮಟ್ಟಿಗೆ ಇಂಡಿಯಾ ಮೈತ್ರಿಕೂಟ ಮುನ್ನಡೆ ಸಾಧಿಸಿದೆ. ಲೋಕಸಭಾ ಚುನಾವಣೆಯ ನಂತರ ಮೊದಲ ಬಾರಿಗೆ ಈ ವಿಧಾನಸಭೆ ಬೈಎಲೆಕ್ಷನ್ ನಡೆದಿದೆ. 

ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ....

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net