ಸೋತವರಿಗೆ ಸಚಿವ ಸ್ಥಾನ ನೀಡುವ ವಿಚಾರದಲ್ಲಿ ಉಲ್ಟಾ ಹೊಡೆದ ಡಿಸಿಎಂ ಅಶ್ವಥ್ ನಾರಾಯಣ

C N Ashwath Narayana
Published on

ಹಾಸನ: ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ದಿನೇ ದಿನೇ ಕುತೂಹಲ ಕೆರಳಿಸುತ್ತಿದೆ. ಪಕ್ಷದಲ್ಲಿ ಭಿನ್ನಾಭಿಪ್ರಾಯ ಮೂಡಬಹುದೆಂಬ ಆತಂಕದಿಂದ ಸಂಪುಟ ವಿಸ್ತರಣೆ ಕಗ್ಗಂಟಾಗಿದೆ ಎಂಬ ವಿಚಾರ ಬೆಳಕಿಗೆ ಬರುತ್ತಿರುವ ಬೆನ್ನಲ್ಲೇ ಹಾಗೇನು ಇಲ್ಲವೆಂದು ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ ಹೇಳಿದ್ದಾರೆ.

ಬುಧವಾರ ಹಾನಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಂತ್ರಿ ಮಂಡಲ ವಿಸ್ತರಣೆ ವಿಚಾರದಲ್ಲಿ ಕಗ್ಗಂಟೇನು ಇಲ್ಲ. ಮಂತ್ರಿ ಮಂಡಲ ವಿಸ್ತರಣೆಯಾಗಲಿದೆ. ಸಿಎಂಗೆ ಎಲ್ಲ ಅಧಿಕಾರವಿದ್ದು, ಈ ಬಗ್ಗೆ ಮುಂದಿನ ದಿನಗಳಲ್ಲಿ ತಿಳಿಸುತ್ತಾರೆ ಎಂದರು.

ಸುಪ್ರೀಂಕೋರ್ಟ್ ತೀರ್ಪಿನಲ್ಲಿ ಗೆದ್ದವರಿಗೆ ಮಂತ್ರಿ ಸ್ಥಾನ ಕೊಡಬೇಕು ಎಂದಿದೆ. ಹೀಗಾಗಿ ಸೋತವರ ಬಗ್ಗೆ ಮುಖ್ಯಮಂತ್ರಿ ತೀರ್ಮಾನ ಮಾಡುತ್ತಾರೆ ಎನ್ನುವ ಮೂಲಕ ಸೋತವರಿಗೆ ಸಚಿವ ಸ್ಥಾನ ನೀಡುವ ವಿಚಾರದಲ್ಲಿ ಡಿಸಿಎಂ ಅಶ್ವಥ್​ ನಾರಾಯಣ್​ ಉಲ್ಟಾ ಹೊಡೆದರು.

ಸಂಪುಟ ವಿಸ್ತರಣೆ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ. ಎಲ್ಲರಿಗೂ ಒಳ್ಳೆಯದಾಗಲಿದೆ. ನಮ್ಮ ಪಕ್ಷ ಎಲ್ಲರಿಗೂ ಒಳ್ಳೆಯದು ಮಾಡಲಿದೆ. ಸುಪ್ರೀಂಕೋರ್ಟ್ ಹೇಳಿರುವ ಪ್ರಕಾರ ಗೆದ್ದವರಿಗೆ ಮಾತ್ರ ಸಚಿವ ಸ್ಥಾನ ನೀಡಬೇಕು ಎಂದಿದೆ ಎಂದರು. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net