ಕೈಗಾರಿಕೆ ಕಾರಿಡಾರ್ ಯೋಜನೆಗೆ ಸಂಪುಟ ಒಪ್ಪಿಗೆ

11klr3-k.y.najegowda-1
Published on

ಕೋಲಾರ: ಸುಮಾರು 110 ಕಿಮೀ ಕೈಗಾರಿಕಾ ಕಾರಿಡಾರ್ ಯೋಜನೆಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದ್ದು, .ನ190 ಕೋಟಿ ರೂ. ಮೀಸಲಿರಿಸಿದೆ ಎಂದು ಮಾಲೂರು ಶಾಸಕ ಕೆ.ವೈ.ನಂಜೇಗೌಡ ಸಂಸತ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿ ಸೋಮವಾರ ನಡೆದ ಸಚಿವ ಸಂಪುಟದ ನಂತರ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರನ್ನು ಅಭಿನಂಽಸಿ ಮಾಧ್ಯಮದವದೊಂದಿಗೆ ಮಾತನಾಡಿ, ಹೆದ್ದಾರಿ ಜತೆಗೆ ಮಾಲೂರು ಸಮೀಪದಲ್ಲಿ ಸೇತುವೆ ನಿರ್ಮಾಣಕ್ಕೂ ಅನುದಾನ ಸಿಕ್ಕಿರುವುದು ಖುಷಿ ತಂದಿದೆ ಎಂದರು.

ದೇವನಹಳ್ಳಿಯಿAದ ತಮಿಳುನಾಡು ಗಡಿ ಹೊಸೂರು ಗಡಿಯವರೆಗಿನ 110 ಕಿ.ಮೀ. ಕೈಗಾರಿಕಾ ಕಾರಿಡಾರ್ ಯೋಜನೆಗೆ ಸಚಿವ ಸಂಪುಟ ಸಭೆ ಅನುಮೋದಿಸಿದ್ದು, ಆಮೂಲಕ ಮಾಲೂರಿಗೆ ಸಿಂಹಪಾಲು ಅನುದಾನ ಸಿಕ್ಕಿದೆ ಎಂದು ಖುಷಿ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕೈಗಾರಿಕಾ ಕಾರಿಡಾರ್ ಯೋಜನೆಯನ್ನು ಘೋಷಿಸಿದ್ದರು. ಅದರಂತೆ 1,860 ಕೋಟಿ ರೂ. ಮೀಸಲಿಟ್ಟಿದ್ದರು. ಮಾಲೂರು ಕ್ಷೇತ್ರದಲ್ಲಿ ಹೊರ ವರ್ತುಲ ರಸ್ತೆ ಹಾಗೂ ರೈಲ್ವೆ ಮೇಲ್ಸೇತುವೆ ನಿರ್ಮಿಸಬೇಕಾಗಿತ್ತು. ಇದರಿಂದ ಯೋಜನೆಗೆ ಹಿನ್ನಡೆಯಾಗುತ್ತದೆಂಬ ಮಾಹಿತಿಯನ್ನು ಸರ್ಕಾರಕ್ಕೆ ಗಮನಕ್ಕೆ ತಂದಾಗ ಸಾಧಕ ಬಾಧಕಗಳನ್ನು ಚರ್ಚಿಸಿ ಸರ್ಕಾರವು ಯೋಜನೆಗಾಗಿ 3,190 ಕೋಟಿ ರೂ. ಮೀಸಲಿಟ್ಟಿದೆ ಎಂದು ಮಾಹಿತಿ ನೀಡಿದರು.

ಮಾಲೂರು ನಗರದಲ್ಲಿಯೇ ಮೇಲ್ಸೇತುವೆ ನಿರ್ಮಿಸುವಂತೆ ಕೋರಲಾಗಿತ್ತು. ಅದರಂತೆ ಮಾಲೂರಿಗೆ ಭೇಟಿ ನೀಡಿದ್ದ ರಾಜ್ಯಮಟ್ಟದ ಅಧಿಕಾರಿಗಳು ವರದಿ ನೀಡಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಮಾಲೂರು ನಗರದಲ್ಲಿ 3.6 ಕಿಮೀ ಉದ್ದದ ಮೇಲ್ಸೇತುವೆ ನಿರ್ಮಿಸಲು ಒಪ್ಪಿದ್ದಾರೆ ಎಂದರು.

ದೇವನಹಳ್ಳಿ, ವಿಜಯಪುರ, ಎಚ್.ಕ್ರಾಸ್, ವೇಮಗಲ್ ಮೂಲಕ ನರಸಾಪುರದ ಮೂಲಕ ಕ್ಷೇತ್ರ ಪ್ರವೇಶಿಸಿರುವ ನಾಲ್ಕು ಪಥದ ಡಾಂಬರು ರಸ್ತೆ ಹಾಗೂ ಮಾಲೂರಿನಿಂದ ಹೊಸಕೋಟೆಯವರಿನ ಕಾಂಕ್ರಿಟ್ ರಸ್ತೆಯೊಂದಿಗೆ 3.6 ಕಿ.ಮೀ ಉದ್ದದ ಮೇಲ್ಸೇತುವೆ ಕಾಮಗಾರಿ ಕ್ಷೇತ್ರದಲ್ಲಿ ಆಗಲಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net