ಭಾರತೀಯ ಸೇನೆಯ ಮುಂದಿನ ಮುಖ್ಯಸ್ಥ ಯಾರು? ಕೇಂದ್ರ ಸಂಪುಟ ಸಮಿತಿಯ ಮಹತ್ವದ ಸಭೆ

modir
Published on

ನವದೆಹಲಿ: ತಮಿಳುನಾಡಿನ ಕೂನೂರಿನಲ್ಲಿ ಸಂಭವಿಸಿದ ಸೇನಾ ಹೆಲಿಕಾಪ್ಟರ್​ ಅಪಘಾತದಲ್ಲಿ ಗಾಯಗೊಂಡ ಭಾರತೀಯ ಸೇನಾಪಡೆಯ ಮುಖ್ಯಸ್ಥ(ಸಿಡಿಎಸ್​) ಜನರಲ್​​ ಬಿಪಿನ್​ ರಾವತ್ ನಿಧನರಾಗಿದ್ದಾರೆ. ಈ ಆಘಾತಕಾರಿ ಘಟನೆಯ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳಿಗೆ ಸಂಬಂಧಿಸಿದ ಕೇಂದ್ರ ಸಂಪುಟ ಸಮಿತಿಯು ನವದೆಹಲಿಯಲ್ಲಿ ಚರ್ಚೆ ನಡೆಯುತ್ತಿದೆ ಎಂದು ವರದಿಗಳು ತಿಳಿಸಿವೆ.

ಭಾರತದ ಭದ್ರತಾ ಪಡೆಗಳ ಉನ್ನತ ಮಟ್ಟದ ನೇಮಕಾತಿಗಳ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸರ್ಕಾರದ ಕ್ಯಾಬಿನೆಟ್​ ಕಮಿಟಿ ಆನ್​ ಸೆಕ್ಯುರಿಟಿ(ಸಿಸಿಎಸ್​​)ಯ ಸಭೆಯು ಇಂದು ಸಂಜೆ 6.30ರಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯುವುದಾಗಿ ಎಎನ್​ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಜನರಲ್​ ರಾವತ್​ರಂಥ ಸಮರ್ಥ ನಾಯಕರನ್ನು ಕಳೆದುಕೊಂಡ ನೋವಿನ ಸಂದರ್ಭದಲ್ಲೇ ಭಾರತೀಯ ಸೇನೆಗೆ ತಕ್ಷಣವೇ ಮತ್ತೊಬ್ಬ ಯೋಗ್ಯ ಅಧಿಕಾರಿಯನ್ನು ಸೇನಾ ಮುಖ್ಯಸ್ಥರಾಗಿ ನೇಮಿಸುವ ಸವಾಲು ಕೇಂದ್ರ ಸರ್ಕಾರದ ಮುಂದಿದೆ. ಈ ಹಿನ್ನೆಲೆಯಲ್ಲಿ ಈ ಸಂಪುಟ ಸಮಿತಿ ಸಭೆ ಮಹತ್ವ ಪಡೆದುಕೊಂಡಿದೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net