ಸಚಿವರ ಖಾತೆ ಬದಲಾವಣೆ ಮಾಡಿದ ಸಿಎಂ ಯಡಿಯೂರಪ್ಪ: ಪರಿಷ್ಕೃತ ಪಟ್ಟಿ ರಾಜ್ಯಪಾಲರ ಅಂಕಿತಕ್ಕೆ ರವಾನೆ

Vidhan Soudha
Published on

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ನಾಲ್ವರು ಸಚಿವರ ಖಾತೆ ಬದಲಾವಣೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಆನಂದ್​ ಸಿಂಗ್​ ಅವರಿಗೆ ಅರಣ್ಯ ಹಾಗೂ ಪರಿಸರ ಖಾತೆ, ಗೋಪಾಲಯ್ಯ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಶಿವರಾಂ ಹೆಬ್ಬಾರ್​ಗೆ ಹಿಂದೆ ನೀಡಿದ್ದ ಕಾರ್ಮಿಕ ಖಾತೆಯೊಂದಿಗೆ ಸಕ್ಕರೆ ಖಾತೆ ಹೆಚ್ಚುವರಿಯಾಗಿ ನೀಡಲಾಗಿದೆ. ಸಿಸಿ ಪಾಟೀಲ್​ ಅವರಿಗೆ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ನೀಡಿದ್ದಾರೆ.

ಸಚಿವರಿಗೆ ಹಂಚಿಕೆ ಮಾಡಿದ ಖಾತೆಗಳ ಪರಿಷ್ಕೃತ ಪಟ್ಟಿಯನ್ನು ಸಿಎಂ ಯಡಿಯೂರಪ್ಪ ಅನುಮೋದನೆಗಾಗಿ ರಾಜ್ಯಪಾಲರಿಗೆ ಕಳುಹಿಸಿಕೊಟ್ಟಿದ್ದಾರೆ.

ರಾಜ್ಯಪಾಲರ ಅಂಕಿತ ದೊರೆತ ನಂತರ ಅಧಿಕೃತ ಆದೇಶ ಸಂಜೆ ಹೊರಬೀಳಲಿದೆ ಎಂದು ಮೂಲಗಳು ತಿಳಿಸಿವೆ (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net