ಹುಲಿ ದಾಳಿಗೆ ಕರು ಬಲಿ

tiger-007
Published on

ಎಚ್.ಡಿ.ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಅಂತರಸಂತೆ ಗ್ರಾಮದಲ್ಲಿ ಭಾನುವಾರ ಹುಲಿ ದಾಳಿಗೆ ಕರು ಬಲಿಯಾಗಿದೆ.

ಎ.ಪಿ.ಕೃಷ್ಣ ಅವರ ಜಮೀನಿನಲ್ಲಿ ಮೇಯಲು ಬಿಟ್ಟಿದ್ದ ಕರುವಿನ ಮೇಲೆ ಹುಲಿ ದಾಳಿ ನಡೆಸಿ ಬಲಿ ಪಡೆದಿದೆ. ಹುಲಿ ದಾಳಿ ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಸುತ್ತಲಿನ ಪ್ರದೇಶವನ್ನು ಪರಿಶೀಲನೆ ನಡೆಸಿದ್ದು, ಈ ವೇಳೆ ಹುಲಿಯ ಹೆಜ್ಜೆ ಗುರುತುಗಳು ಪತ್ತೆಯಾಗಿವೆ. ಅಲ್ಲದೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರೂ ಹುಲಿಯನ್ನು ಕಂಡಿರುವುದಾಗಿ ಹೇಳುತ್ತಿದ್ದು, ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ.

ಸದ್ಯ ದಾಳಿ ನಡೆದಿರುವ ಸುತ್ತಮುತ್ತಲಿನ ಪ್ರದೇಶದಲ್ಲಿ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, ಹುಲಿ ಚಲನವಲನದ ಮೇಲೆ ನಿಗಾ ಇಡಲಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ. ಅಲ್ಲದೆ ಅಂತರಸಂತೆ, ಶೀರನಹುಂಡಿ, ಅಂಕನಾಥಪುರ ಗ್ರಾಮಗಳಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದಿದ್ದು, ಒಬ್ಬೊಬ್ಬರೆ ಜಮೀನುಗಳಿಗೆ ತೆರಳದಂತೆ ಧ್ವನಿ ವರ್ಧಕಗಳ ಮೂಲಕ ಅರಣ್ಯ ಇಲಾಖೆ ಎಚ್ಚರಿಕೆಯನ್ನೂ ನೀಡಿದೆ.

ಸ್ಥಳದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಅಂಥೋನಿ ಸ್ವಾಮಿ, ಸುನೀಲ್ ನಲ್ಲೇಬೀಡು, ಮೋಹನ್ ಕುಮಾರ್ ಮುಂತಾದವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net