

ಬೆಂಗಳೂರು 2024ನೇ ಸಾಲಿನ ‘ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಅರ್ಹ ಶಿಕ್ಷಕರು ಆನ್‌ಲೈನ್ ಮೂಲಕ ಜು.15ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯು ತಿಳಿಸಿದೆ.
ಶಾಲಾ ಶಿಕ್ಷಣ ಕ್ಷೇತ್ರಕ್ಕೆ ಮತ್ತು ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ದೇಶಾದ್ಯಂತ ಶಿಕ್ಷಕರು ನೀಡಿರುವ ಅನನ್ಯ ಸೇವೆಯನ್ನು ಸ್ಮರಿಸಿ ಅಂತಹ ಅತ್ಯುತ್ತಮ ಶಿಕ್ಷಕರನ್ನು ಗೌರವಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ವತಿಯಿಂದ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಪ್ರತಿ ವರ್ಷ ಪ್ರದಾನ ಮಾಡಲಾಗುತ್ತಿದೆ. ಅದರಂತೆ, 2024ನೇ ಸಾಲಿನ ‘ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಅರ್ಹ ಶಿಕ್ಷಕರು, ಉಪನ್ಯಾಸಕರು, ಉಪನ್ಯಾಸಕರು ಮತ್ತು ಪ್ರಾಂಶುಪಾಲರು ಆನ್‌ಲೈನ್ ಪೋರ್ಟಲ್ ಠಿಠಿ://್ಞಠಿಜಿಟ್ಞಚ್ಝಡಿಚ್ಟಠಿಟಠಿಛಿಚ್ಚಛ್ಟಿ.ಛಿಛ್ಠ್ಚಠಿಜಿಟ್ಞ.ಜಟ.ಜ್ಞಿ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದಿರುವ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮತ್ತು ಕನಿಷ್ಠ 10 ವರ್ಷಗಳ ಸೇವೆಯನ್ನು ಪೂರೈಸಿರುವವರು ಹಾಗೂ ಕಳೆದ ಏ.30ಕ್ಕೆ ಸೇವೆಯಿಂದ ನಿವೃತ್ತರಾಗಿರುವ ಪ್ರತಿ ಜಿಲ್ಲೆಯಿಂದ ಕನಿಷ್ಠ 50-60 ಮಂದಿ ನಿಗದತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಶಿಕ್ಷಕರು ಶಿಕ್ಷಣ ಇಲಾಖೆ ವೆಬ್‌ಸೈಟ್ ಮೂಲಕ ನೋಂದಣಿ ಮಾಡಿಕೊಂಡು ಸಂಬಂಧಪಟ್ಟ ಸೂಚನೆಗಳನ್ನು ಓದಿಕೊಳ್ಳಬೇಕು. ಈ ಸಂಬಂಧ ಬಿಇಒ ಮತ್ತು ಡಿಡಿಪಿಐ ಕಚೇರಿಗಳಲ್ಲಿ ಸಹಾಯ ಕೇಂದ್ರಗಳನ್ನು ನಿರ್ಮಿಸಿ ಹಿರಿಯ ಅಧಿಕಾರಿಗಳನ್ನು ನೋಡಲ್ ಅಧಿಕಾರಿಯನ್ನು ನೇಮಿಸಿ ಅರ್ಜಿದಾರರಿಗೆ ಸೂಕ್ತ ತರಬೇತಿ ಮತ್ತು ಮಾರ್ಗದರ್ಶನ ನೀಡಲು ತಿಳಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.