ಕೇಂಬ್ರಿಡ್ಜ್ ತಾಂತ್ರಿಕ ಮಹಾವಿದ್ಯಾಲಯ; ಬಿಇ ತರಗತಿಗಳನ್ನು ಉದ್ಘಾಟಿಸಿದ ಸಚಿವ

Published on

ಬೆಂಗಳೂರು:
ಕೆ.ಆರ್.ಪುರಂನಲ್ಲಿರುವ ಕೇಂಬ್ರಿಡ್ಜ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ 2024-25ನೇ ಸಾಲಿನ
ಶೈಕ್ಷಣಿಕ ಪ್ರಥಮ ವರ್ಷದ ಬಿ.ಇ. ತರಗತಿಗಳಿಗೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.
ವಿದ್ಯಾರ್ಥಿಗಳ ಭವಿಷ್ಯ ಮಹತ್ವದ್ದು. ನಿಮ್ಮ ಗುರಿ ದೊಡ್ದದಿರಲಿ. ಧೃಢ ನಿರ್ಧಾರದಿಂದ ಓದಿನತ್ತ ಗಮನ ನೀಡಿದರೆ ಗುರಿ ಸಾಧಿಸಲು ಸಾಧ್ಯ ಎಂದರು.
ಕೇಂಬ್ರಿಡ್ಜ್ ತಾಂತ್ರಿಕ ಮಹಾವಿದ್ಯಾಲಯ ಅತ್ಯುತ್ತಮ ಮೂಲ ಸೌಲಭ್ಯವನ್ನು ಹೊಂದಿದೆ. ಗುಣಮಟ್ಟದಲ್ಲಿ ಎಂದೂ ರಾಜಿ ಮಾಡಿಕೊಂಡಿಲ್ಲ. ಕಾಲೇಜಿನ ಆವರಣದಲ್ಲಿ ಹಲವಾರು ಸಂಸ್ಥೆಗಳು ಸ್ಟಾರ್ಟಪ್ ಸ್ಥಾಪನೆ ಮಾಡಿದ ಕೀರ್ತಿ ಹೆಗ್ಗಳಿಕೆ ಇದೆ. ಇಂಥ ಸಂಸ್ಥೆಯಲ್ಲಿ ವಿದ್ಯಾರ್ಥಿಗಳು ಉತ್ತಮ ಪರಿಶ್ರಮದಿಂದ ಸಾಧನೆ ಮಾಡಲು ಮುಂದಾಗಬೇಕು ಎಂದರು.
ಕೇಂಬ್ರಿಡ್ಜ್ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಡಿ.ಕೆ.ಮೋಹನ್ ಅವರು ಮಾತನಾಡಿ, ಈ ಸಂಸ್ಥೆಯು ಉತ್ತಮ ಮೂಲ ಸೌಕರ್ಯ ಹೊಂದಿದ್ದು, ಜಾಗತಿಕ ಮಟ್ಟದಲ್ಲಿ ಗಮನ ಸೆಳೆಯುತ್ತಿದೆ. ಇದನ್ನು ಉಪಯೋಗಿಸಿಕೊಂಡು ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವ ಮೂಲಕ ಗುರಿ ಸಾಧನೆ ಮಾಡಬೇಕು ಎಂದರು.
ಜಾಗತಿಕ ವಿಶ್ಲೇಷಕ ಆನಂದ್ ಮುನ್ಷಿ ಅವರು ಮಾತನಾಡಿ, ವಿದ್ಯಾರ್ಥಿಗಳು ಹೇಗೆ ಪರಿಶ್ರಮದಿಂದ ಮುಂದೆ ಬರಬೇಕು ಎನ್ನುವುದರ ಬಗ್ಗೆ ಸ್ಪೂರ್ತಿದಾಯಕ ಮಾತುಗಳನ್ನಾಡಿದರು.
ಕೇಂಬ್ರಿಡ್ಜ್ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಜಿ.ಇಂದುಮತಿ, ಸಂಸ್ಥೆಯ ಎಲ್ಲಾ ವಿಭಾಗದ ಮುಖ್ಯಸ್ಥರು, ಬೋದಕೇತರ ಸಿಬ್ಬಂದಿಗಳು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net