ಡಿ. 27ರಿಂದ ಗೃಹಲಕ್ಷ್ಮೀ ಸಮಸ್ಯೆ ಪರಿಹಾರಕ್ಕೆ ಕ್ಯಾಂಪ್

zp ceo Snehal lokhande
ಜಿಲ್ಲಾ ಪಂಚಾಯತಿ ಸಿಇಒ ಸ್ನೇಹಲ್ ಲೋಖಂಡೆ
Published on

ಶಿವಮೊಗ್ಗ: ಜಿಲ್ಲಾ ಪಂಚಾಯಿತಿಯು ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಸಮಸ್ಯೆ ಪರಿಹರಿಸಲು ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಡಿ. 27ರಿಂದ 29ರವರೆಗೆ ಬೆಳಗ್ಗೆ 9ರಿಂದ ಸಂಜೆ 5ರವರೆಗೆ ಕ್ಯಾಂಪ್‌ಗಳನ್ನು ಆಯೋಜಿಸಿದೆ.

ಈ ಕ್ಯಾಂಪ್‌ನಲ್ಲಿ ಸ್ಥಳೀಯ ಬಾಪೂಜಿ ಸೇವಾ ಕೇಂದ್ರದ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತರು, ಇಡಿಸಿಎಸ್ ತಂಡ ಹಾಗೂ ಇಂಡಿಯಾ ಪೋಸ್ಟ್ ಪೇಮಂಟ್ ಬ್ಯಾಂಕ್ ಪ್ರತಿನಿಧಿಗಳು ಮತ್ತು ಇತರೆ ಬ್ಯಾಂಕ್ ಪ್ರತಿನಿಧಿಗಳು ಭಾಗವಹಿಸಲಿದ್ದು, ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ, ಹೊಸ ಖಾತೆ ತೆರೆಯುವುದು, ಇ-ಕೆವೈಸಿ ಅಪ್‌ಡೆಟ್ ಮಾಡುವುದು, ಗೃಹಲಕ್ಷ್ಮೀ ಅರ್ಜಿ ಸ್ಥಿತಿ ಪರಿಶೀಲಿಸುವುದು ಹಾಗೂ ಇದಕ್ಕೆ ಸಂಬಂಧಿಸಿದ ಇತರೆ ಸಮಸ್ಯೆಗಳನ್ನು ಪರಿಹರಿಸಲಿದ್ದಾರೆ.
ಹೆಚ್ಚಿನ ಮಾಹಿತಿಗೆ ತಾಲೂಕು ಶಿಶು ಅಭಿವೃದ್ಧಿ ಯೋಜನಾ ಕಚೇರಿಗೆ ಹಾಗೂ ಕ್ಷೇತ್ರ ಮಟ್ಟದಲ್ಲಿ ಗ್ರಾಮ ಪಂಚಾಯಿತಿ ಮತ್ತು ಅಂಗನವಾಡಿ ಕಾರ್ಯಕರ್ತೆಯರನ್ನು ಸಂಪರ್ಕಿಸುವಂತೆ ಜಿಲ್ಲಾ ಪಂಚಾಯತಿ ಸಿಇಒ ಸ್ನೇಹಲ್ ಲೋಖಂಡೆ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net