ಕರೀನಾ ಜೊತೆ ಕಾಣಿಸಿಕೊಂಡ ಆಲಿಯಾ ಹೊಸ ಮನವಿ-''ಒಂದೇ ಸಿನಿಮಾದಲ್ಲಿ ನಟಿಸಲು ಚಾನ್ಸ್​​ ಕೊಡಿ''

alc
Published on

ನಟಿ ಆಲಿಯಾ ಭಟ್ ಹಾಗೂ ಕರೀನಾ ಕಪೂರ್ ಅವರು ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಆದರೆ, ಇವರಿಗೆ ಒಟ್ಟಿಗೆ ನಟಿಸೋಕೆ ಅವಕಾಶ ಸಿಕ್ಕಿರಲಿಲ್ಲ. ಈಗ ಇಬ್ಬರೂ ಒಟ್ಟಿಗೆ ಇರೋ ಫೋಟೋ ಹಂಚಿಕೊಂಡಿದ್ದಾರೆ. ಜೊತೆಗೆ ವಿಶೇಷ ಮನವಿ ಮಾಡಿದ್ದಾರೆ.


ಕರೀನಾ ಕಪೂರ್ ಜೊತೆ ನಿಂತು ಆಲಿಯಾ ಭಟ್ ಪೋಸ್ ನೀಡಿದ್ದಾರೆ. ಈ ಫೋಟೋಗೆ ಅವರು ‘ಒಂದೇ ಸಿನಿಮಾದಲ್ಲಿ ನಟಿಸೋಕೆ ಚಾನ್ಸ್ ಕೊಡಿ’ ಎಂದು ಕ್ಯಾಪ್ಷನ್ ನೀಡಿದ್ದಾರೆ.

ಈ ಮನವಿಯನ್ನು ಯಾವುದಾದರೂ ನಿರ್ಮಾಪಕರು ಪರಿಗಣಿಸಿ ಒಂದೇ ಸಿನಿಮಾದಲ್ಲಿ ಕಾಸ್ಟ್​​ ಮಾಡುತ್ತಾರಾ ಅನ್ನೋದನ್ನ ಕಾದು ನೋಡ ಬೇಕಿದೆ.
ಕರೀನಾ ಕಪೂರ್ ಹಾಗೂ ಆಲಿಯಾ ಭಟ್ ಒಟ್ಟಾಗಿ ಕಾಣಿಸಿಕೊಂಡಿದ್ದು ಜಾಹೀರಾತಿಗಾಗಿ ಎಂದು ಹೇಳಲಾಗುತ್ತಿದೆ.

ಆದರೆ ಈ ಬಗ್ಗೆ ಅವರ ಕಡೆಯಿಂದ ಯಾವುದೇ ಮಾಹಿತಿ ಸಿಕ್ಕಿಲ್ಲ.
ಆಲಿಯಾ ಭಟ್ ನಟನೆಯ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾ ಥಿಯೇಟರ್​ನಲ್ಲಿ ರಿಲೀಸ್ ಆಗಿ ಹಿಟ್ ಆಯಿತು. ಈ ಚಿತ್ರ 100+ ಕೋಟಿ ರೂಪಾಯಿ ಮಾಡಿದೆ. ಜೊತೆಗೆ ಅವರ ಮೊದಲ ಇಂಗ್ಲಿಷ್ ಸಿನಿಮಾ ‘ಹಾರ್ಟ್ ಆಫ್ ಸ್ಟೋನ್’ ಒಟಿಟಿಯಲ್ಲಿ ಬಿಡುಗಡೆ ಆಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net