ಒಟಿಎಸ್ ರದ್ದುಗೊಳಿಸಿ; ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಸರ್ಕಾರಕ್ಕೆ ಆಗ್ರಹ|Cancel OTS; AAP state president Mukhyamantri Chandru demands the government

aaaa
Published on

ಬೆಂಗಳೂರು: ರಾಜ್ಯದ ನೈಸರ್ಗಿಕ ಸಂಪತ್ತು ಲೂಟಿ ಮಾಡಿ ಸಾವಿರಾರು ಕೋಟಿ ರೂ.ನಷ್ಟ ಮಾಡಿರುವ ಗಣಿಗಾರಿಕೆಗೆ ಸರ್ಕಾರ ನೀಡಲು ಉದ್ದೇಶಿಸಿರುವ ಒಟಿಎಸ್ ಸೌಲಭ್ಯಗಳನ್ನು ತಕ್ಷಣ ಹಿಂಪಡೆಯುವಂತೆ(Cancel OTS; AAP state president Mukhyamantri Chandru demands the government) ಎಎಪಿ ಆಗ್ರಹಿಸಿದೆ.

ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಸರ್ಕಾರಕ್ಕೆ ಪತ್ರ ಬರೆದು, ಯಾವುದೇ ಕಾರಣಕ್ಕೂ ಈ ಅನಿಷ್ಠ ನೀತಿ ಜಾರಿಗೊಳಿಸಬೇಡಿ. ರಾಜ್ಯದಲ್ಲಿ ಅನೇಕ ಕಂಪನಿಗಳು ಕ್ರಮಬದ್ಧವಾಗಿ ಗಣಿಗಾರಿಕೆ ನಡೆಸಿಕೊಂಡು ರಾಯಧನ ಸೇರಿದಂತೆ ಅನೇಕ ತೆರಿಗೆಗಳನ್ನು ಪ್ರಾಮಾಣಿಕವಾಗಿ ಪಾವತಿ ಮಾಡಿಕೊಂಡು ಬರುತ್ತಿದ್ದಾರೆ. ಇಂತಹ ವರ್ಗಗಳಿಗೆ ಬೆಂಬಲ, ಉತ್ತೇಜನ ನೀಡುವ ಬದಲು ಒಟಿಎಸ್ ನೀತಿ ಅಕ್ರಮ ಗಣಿಗಾರಿಕೆಗಳಿಗೆ ಮತ್ತಷ್ಟು ಇಂಬು ನೀಡುವಂತಿದೆ ಎಂದು ಕಿಡಿ ಕಾರಿದ್ದಾರೆ.

ಅಕ್ರಮ ಗಣಿಗಾರಿಕೆಗಳ ಮೇಲೆ ಕಠಿಣ ಕಾನೂನು ಕ್ರಮ ತೆಗೆದುಕೊಂಡು, ಅವರುಗಳ ಆಸ್ತಿಗಳನ್ನು ಜಪ್ತಿ ಮಾಡಿಕೊಳ್ಳುವ ಮೂಲಕ ರಾಯಧನ ಹಾಗೂ ಇನ್ನಿತರ ದಂಡ ಮೊತ್ತವನ್ನು ವಸೂಲಿ ಮಾಡಬೇಕು. ಅದನ್ನು ಬಿಟ್ಟು ಅಕ್ರಮ ಗಣಿಗಾರಿಕೆಗೆ ಮತ್ತಷ್ಟು ಅವಕಾಶ ನೀಡುವ ರೀತಿಯಲ್ಲಿ ಒಟಿಎಸ್ ಪದ್ಧತಿ ಜಾರಿಗೆ ತಂದಲ್ಲಿ ರಾಜ್ಯವು ಮತ್ತಷ್ಟು ಆರ್ಥಿಕ ಸಂಕಷ್ಟಕ್ಕೆ ಗುರಿಯಾಗುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಮುಖ್ಯಮಂತ್ರಿ ಚಂದ್ರು ಸರ್ಕಾರವನ್ನು ಎಚ್ಚರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net