ಷಡಾಕ್ಷರಿ ವರ್ಗಾವಣೆ ತಕ್ಷಣವೇ ರದ್ದುಗೊಳಿಸಿ: ಡಿ.ಬಿ.ಶಂಕರಪ್ಪ

d.b.Shankrappa
ನಂದಿ ವಿದ್ಯಾಸಂಸ್ಥೆ ಅಧ್ಯಕ್ಷ ಡಿ.ಬಿ.ಶಂಕರಪ್ಪ.
Published on

ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರ ವರ್ಗಾವಣೆಯನ್ನು ಸರ್ಕಾರ ತಕ್ಷಣವೇ ರದ್ದುಗೊಳಿಸಬೇಕು ಎಂದು ನಂದಿ ವಿದ್ಯಾಸಂಸ್ಥೆ ಅಧ್ಯಕ್ಷ ಡಿ.ಬಿ.ಶಂಕರಪ್ಪ ಆಗ್ರಹಿಸಿದರು.

ಸಿ.ಎಸ್.ಷಡಾಕ್ಷರಿ ಅವರು ಸರ್ಕಾರಿ ನೌಕರರ ಏಳಿಗೆಗಾಗಿ ಕೆಲಸ ಮಾಡಿದ್ದಾರೆ. ಆದರೆ ಯಾರದ್ದೋ ಪೂರ್ವಗ್ರಹ ಪೀಡಿತರ ದೂರಿನಿಂದ ವರ್ಗಾವಣೆ ಮಾಡಿರುವುದು ಸರಿಯಲ್ಲ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.
ಮಣ್ಣಿನ ವಿಷಯಕ್ಕೆ ಸಂಬಂಧಿಸಿದಂತೆ ಇವರ ವಿರುದ್ಧ ದೂರಿದೆ ಎಂಬ ಕೇವಲ ಕ್ಷುಲ್ಲಕ ಕಾರಣಕ್ಕೆ ವರ್ಗಾವಣೆ ಮಾಡಲಾಗಿದೆ. ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಯಾರದ್ದೋ ಮಾತು ಕೇಳಿ ಕೋಲಾರಕ್ಕೆ ವರ್ಗಾವಣೆ ಮಾಡಿಸಿದ್ದಾರೆ. ಕೂಡಲೇ ಈ ವರ್ಗಾವಣೆಯನ್ನು ರದ್ದು ಮಾಡಬೇಕು ಎಂದು ಆಗ್ರಹಿಸಿದರು.
ಸಂಸ್ಥೆಯ ಪ್ರಮುಖರಾದ ಎಚ್.ಷಣ್ಮುಖಪ್ಪ, ಜಗದೀಶ್, ನಟರಾಜ್, ಪರಮೇಶ್ವರಪ್ಪ, ಕಾಂತರಾಜ್, ಚಂದ್ರಪ್ಪ, ಜಯಶಂಕರ್, ಜಯರಾಜ್ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net