ಸಂಚಾರ ನಿಯಮ ಉಲ್ಲಂಸಿದರೆ ಲೈಸೆನ್ಸ್ ರದ್ದುಮಾಡಿ; ಸಾರಿಗೆ ಸಚಿವರಿಗೆ ಮುಖ್ಯಮಂತ್ರಿ ಸೂಚನೆ

Siddaramaiah
Published on

ಬೆಂಗಳೂರು: ಸಂಚಾರಿ ನಿಯಮ ಪಾಲಿಸದೆ ವಾಹನ ಓಡಿಸುವವರ, ಕುಡಿದು ವಾಹನ ಚಲಾಯಿಸುವರ ಚಾಲನಾ ಪರವಾನಗಿಯನ್ನು ರದ್ದು ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರಿಗೆ ಸಚಿವರಿಗೆ ಸೂಚನೆ ನೀಡಿದ್ದಾರೆ.
ವಿಧಾನಸೌಧ ಮುಂಭಾಗದಲ್ಲಿ ನಡೆದ ಆಂಬ್ಯುಲೆನ್ಸ್ ಸೇವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಸ್ತೆ ನಿಯಮ ಉಲ್ಲಂಸಿದವರಿಗೆ ನೋಟಿಸ್ ಕೊಟ್ಟು ಕ್ರಮಕೈಗೊಂಡರೆ ಸಾಲದು ಅವರ ಲೈಸೆನ್ಸ್ ರದ್ದು ಮಾಡಿ. ಸಂಚಾರಿ ನಿಯಮಗಳನ್ನು ಶಿಸ್ತಿನಿಂದ ಪಾಲಿಸಿದರೆ ಬಹುತೇಕ ಅಪಘಾತಗಳು ಸಂಭವಿಸುವುದೇ ಇಲ್ಲ. ಅಪಘಾತ ಕಡಿಮೆ ಮಾಡಲು ಇಂತಹ ಕ್ರಮ ಅನಿವಾರ್ಯ ಎಂದು ವಿದೇಶದ ಉದಾಹರಣೆ ನೀಡಿದರು.
ಮೊಬೈಲ್ ಮಾತಾಡಿಕೊಂಡು ವಾಹನ ಓಡಿಸಿದರೆ ಅಪಘಾತಗಳಾಗದೆ ಇರುತ್ತದಾ ಎಂದು ಪ್ರಶ್ನಿಸಿದ ಅವರು, ಗರಿಷ್ಠ 80 ಕಿಮೀ ವೇಗ ಎಂದು ಬೋರ್ಡ್ ಇದ್ದರೂ 120 ಕಿ.ಮೀ ವೇಗದಲ್ಲಿ ವಾಹನ ಓಡಿಸುತ್ತಾರೆ. ಇದೆಲ್ಲ ಬಿಡಬೇಕು ಎಂದು ಸಲಹೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net