

ಶಿಕಾರಿಪುರ: ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದ ಆರ್‌ಎಫ್‌ಒ ಅವರ ವರ್ಗಾವಣೆ ರದ್ದು ಮಾಡುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಜಯಕರ್ನಾಟಕ ಜನಪರ ವೇದಿಕೆ ಪದಾಧಿಕಾರಿಗಳು ಶಾಸಕ ಬಿ.ವೈ.ರಾಘವೇಂದ್ರ ಅವರಿಗೆ ಮನವಿ ಸಲ್ಲಿಸಿದರು.
2024-25ರಲ್ಲಿ ಮುಖ್ಯಮಂತ್ರಿಗಳ ಪದಕ ಪಡೆದಿರುವ ಅವರು ಅರಣ್ಯ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಶಿಕಾರಿಪುರ ವಲಯದಲ್ಲಿ ಬಹಳಷ್ಟು ಅರಣ್ಯ ಸಂಪತ್ತು ಕಾಪಾಡಲು ಕಾರ್ಯ ನಿರ್ವಹಿಸು ತ್ತಿದ್ದಾರೆ. ಹಲವು ಪ್ರಕರಣಗಳನ್ನು ಭೇದಿಸಿದ್ದಾರೆ ಮತ್ತು ಸಾರ್ವಜನಿಕ ವಲಯದಲ್ಲಿ ಉತ್ತಮ ಹೆಸರು ಗಳಿಸಿದ್ದಾರೆ. ಅವರು ಶಿಕಾರಿಪುರದಲ್ಲಿಯೇ ಕಾರ್ಯ ನಿರ್ವಹಿಸುವಂತೆ ಮಾಡಿ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ, ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಸಂಸದ ರಾಘವೇಂದ್ರ, ಶಾಸಕ ವಿಜಯೇಂದ್ರ ಅವರಿಗೆ ಮತ್ತು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ ಎಂದು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುಲಗಿ ಕೃಷ್ಣ ಹೇಳಿದರು.
ಜಯ ಕರ್ನಾಟಕ ಜನಪರ ವೇದಿಕೆ ಅಧ್ಯಕ್ಷ ಶಿವಯ್ಯ ಶಾಸ್ತ್ರಿ, ವಿಶ್ವ ಹಿಂದು ಪರಿಷತ್ ತಾಲೂಕು ಅಧ್ಯಕ್ಷ ಕುಮಾರಸ್ವಾಮಿ ಹಿರೇಮಠ.,ದಾದಾಪೀರ್, ಎಚ್.ಆನಂದ, ತಾಲೂಕು ಜಂಗಮ ಸಮಾಜದ ಅಧ್ಯಕ್ಷ ಪುಟ್ಸಾಮಿ, ವೀರಶೈವ ಜಂಗಮ ಅರ್ಚಕ ಪುರೋಹಿತ ಸಂಘದ ಕರಿಬಸಯ್ಯ, ಯೋಗೀಶ್ವರಯ್ಯ, ಚನ್ನವೀರಯ್ಯ, ಮಹೇಶ್ವರಯ್ಯ, ಮೃತ್ಯುಂಜಯ, ವೀರೇಶ್, ಈರಣ್ಣ, ಶಂಭುಲಿಂಗಯ್ಯ ಇದ್ದರು.