ನಿಯೋಜನೆ, ಅನುಮೋದನೆ ರಹಿತ ವರ್ಗಾವಣೆ ರದ್ದಿಗೆ ಸೂಚನೆ|Cancellation of transfer

Vidhanasoudha
Published on

ಬೆಂಗಳೂರು: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಈಗ ನಿಯೋಜನೆ ರದ್ದುಗೊಳಿಸುವ(cancellation of retainer, transfer without approval) ಪರ್ವ ಶುರುವಾಗಿದೆ. ನಾನಾ ಕಾರಣಗಳಿಂದ ಬೇರೆ ಬೇರೆ ಇಲಾಖೆಗೆ ನಿಯೋಜನೆ, ಸರ್ಕಾರದ ಅನುಮೋದನೆ ಇಲ್ಲದೇ ವರ್ಗಾವಣೆಗೊಂಡ ನೌಕರರನ್ನು ಮೂಲ ಇಲಾಖೆಗೆ ವಾಪಸ್ ಕರೆಸಿಕೊಳ್ಳುವ ಕೆಲಸ ನಡೆಯುತ್ತಿದೆ.

ಕಂದಾಯ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಗಳು ಈ ನಿಟ್ಟಿನಲ್ಲಿ ದೃಢ ಹೆಜ್ಜೆ ಇಟ್ಟು, ಕಟ್ಟುನಿಟ್ಟಿನ ಸುತ್ತೋಲೆ ಹೊರಡಿಸಿವೆ.

ಕಂದಾಯ ಇಲಾಖೆಯಲ್ಲಿ ಗ್ರಾಮ ಆಡಳೀತ ಅಧಿಕಾರಿಗಳಾಗಿ ನೇಮಕಗೊಂಡು ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ, ತಹಸೀಲ್ದಾರ್ ಕಚೇರಿಗಳಲ್ಲಿ ನಿಯೋಜನೆ/ ಅನ್ಯ ಕರ್ತವ್ಯದ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವವರನ್ನು ಕೂಡಲೇ ಅವರ ಮೂಲ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಲು ಸೂಚಿಸಿ ಬಿಡುಗಡೆ ಮಾಡುವಂತೆ ಸೂಚಿಸಿದೆ.

ಗ್ರಾಮ ಆಡಳಿತಾಧಿಕಾರಿಗಳನ್ನು ನೇಮಕಗೊಂಡ ಮೂಲ ಹುದ್ದೆಯಲ್ಲಿಯೇ ಕರ್ತವ್ಯಕ್ಕೆ ನಿಯೋಜಿಸುವಂತೆ ಸರ್ಕಾರ ಈಗಾಗಲೇ ಹಲವಾರು ಬಾರಿ ನಿರ್ದೇಶನ/ಸೂಚನೆ ನೀಡಲಾಗಿದ್ದರೂ ಮೂಲ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸದಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಈಓ ಸೂಚನೆ ಉಲ್ಲಂಸಿದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವುದಾಗಿ ಕಂದಾಯ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಎಚ್ಚಸಿದ್ದಾರೆ.

ಗ್ರಾಮೀಣಾಭಿವೃದ್ಧಿ ಇಲಾಖೆ

ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೌಕರರ ವರ್ಗಾವಣೆ/ನಿಯೋಜನೆ ರದ್ದು ಪಡಿಸುವಂತೆ ಸರ್ಕಾರ ಸುತ್ತೋಲೆ ಹೊರಡಿಸಿದೆ.

ಸರ್ಕಾರದ ಅನುಮೋದನೆಯಿಲ್ಲದೆ ಜಿಲ್ಲಾ, ತಾಲೂಕು ಪಂಚಾಯಿತಿ ಹಂತದಲ್ಲಿ ಮಾಡಿರುವ ನಿಯೋಜನೆ/ವರ್ಗಾವಣೆಯನ್ನು ತಕ್ಷಣ ರದ್ದುಪಡಿಸುವಂತೆ ತಿಳಿಸಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರನ್ನು ಸರ್ಕಾರದ ಅನುಮೋದನೆಯಿಲ್ಲದೆ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ತಮ್ಮ ಹಂತದಲ್ಲೇ ಸರ್ಕಾರದ ನಿಯಮಗಳನ್ನು ಉಲಂಘಿಸಿ ಮಾಡಿರುವ ವರ್ಗಾವಣೆ/ನಿಯೋಜನೆ ಆದೇಶಗಳನ್ನು ತಕ್ಷಣ ರದ್ದುಪಡಿಸಬೇಕು ಎಂದು ಸ್ಪಷ್ಟ ಸೂಚನೆ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net