

ಬೆಂಗಳೂರು: ಪಿಎಸ್‌ಐ ನೇಮಕಾತಿ ಮರು ಪರೀಕ್ಷೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಆತಂಕಪಡುವುದು ಬೇಡ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಪಿಎಸ್‌ಐ ನೇಮಕಾತಿ ಮರು ಪರೀಕ್ಷೆಗೆ ಸಂಬಂಧಿಸಿದಂತೆ ಗುಪ್ತದಳದ ಪರಿಶೀಲನೆ ವೇಳೆ ಪ್ರಶ್ನೆ ಪತ್ರಿಕೆ ಬಹಿರಂಗದ ಬಗ್ಗೆ ಮಾಹಿತಿ ಹೊರಬಿದ್ದಿದ್ದು, ಸಿಸಿಬಿ ಪೊಲೀಸರು ಕೂಲಂಕುಶ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.
ಆರೋಪದ ಹಿನ್ನೆಲೆಯಲ್ಲಿ ಸಿಸಿಬಿಯವರು ವಿಚಾರಣೆ ನಡೆಸುತ್ತಿದ್ದಾರೆ. ಯಾವುದೇ ರೀತಿಯ ಅಕ್ರಮ ನಡೆದಿಲ್ಲ. ಅಕ್ರಮದ ಬಗ್ಗೆ ಮಾಹಿತಿ ಸಂಗ್ರಹಿಸಲು ನಕಲಿ ಕರೆ ಮಾಡಿರುವುದಾಗಿ ಆರೋಪಿತ ಹೇಳಿಕೆ ನೀಡಿದ್ದಾನೆ. ಸತ್ಯಾಸತ್ಯತೆಯ ಬಗ್ಗೆ ಕುಲಂಕುಶ ಪರಿಶೀಲನೆ ನಡೆಸಲಾಗುತ್ತಿದೆ. ಸುರಕ್ಷಿತವಾಗಿ ಪರೀಕ್ಷೆ ನಡೆಯಲಿದ್ದು, ಅಭ್ಯರ್ಥಿಗಳು ಆತಂಕಪಡುವುದು ಬೇಡ ಎಂದು ಡಾ.ಜಿ.ಪರಮೇಶ್ವರ ತಿಳಿಸಿದರು.