

ಗುಂಡ್ಲುಪೇಟೆ: ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ತಾಲೂಕಿನ ಹಗ್ಗದಹಳ್ಳ ಗ್ರಾಮದ ಜಮೀನಿನಲ್ಲಿ ಬೆಳೆದಿದ್ದ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ.
ಗ್ರಾಮದ ಚನ್ನಮಲ್ಲು ಎಂಬಾತ ತನ್ನ ಜಮೀನಿನಲ್ಲಿ ಅರಿಶಿಣ ಬೆಳೆಯ ನಡುವೆ ಗಾಂಜಾ ಬೆಳೆದಿರುವ ಖಚಿತ ಮಾಹಿತಿ ಮೇರೆಗೆ ಅಬಕಾರಿ ನಿರೀಕ್ಷಕಿ ದೀಪು ಅವರ ನೇತೃತ್ವದಲ್ಲಿ ದಾಳಿ ನಡೆಸಿ 9 ಕೆ.ಜಿ. 500 ಗ್ರಾಂ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದುಕೊಂಡರು. ವಿಷಯ ತಿಳಿದ ಜಮೀನು ಮಾಲೀಕ ಪರಾರಿಯಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.