ಸದ್ಯದಲ್ಲೇ ಬಿಜೆಪಿಗೆ ಅಮರಿಂದರ್​ ಸಿಂಗ್​​​ ಸೇರ್ಪಡೆ: ಪಂಜಾಬ್​ ಲೋಕ್​​ ಕಾಂಗ್ರೆಸ್​ ವಿಲೀನ

Amrindarsingh
Published on

ಚಂಡಿಗಢ: ಕಳೆದ ವರ್ಷ ಕಾಂಗ್ರೆಸ್​ ತೊರೆದಿದ್ದ ಪಂಜಾಬ್​ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್​ ನಾಯಕ ಅಮರಿಂದರ್​​ ಸಿಂಗ್​ ಶೀಘ್ರದಲ್ಲೇ ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಈ ಮೂಲಕ ಬಿಜೆಪಿಯೊಂದಿಗೆ ತಮ್ಮ ಪಕ್ಷ ಪಂಜಾಬ್​ ಲೋಕ್​ ಕಾಂಗ್ರೆಸ್​ ವಿಲೀನಗೊಳಿಸುವ ಸಾಧ್ಯತೆ ಇದೆ.

ಸದ್ಯ ಬೆನ್ನು ನೋವು ಸಮಸ್ಯೆಯಿಂದ ಬಳಲುತ್ತಿರುವ ಅವರು ಲಂಡನ್​​ನಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ. ಅಲ್ಲಿಂದ ಬಂದ ಕೂಡಲೇ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರನ್ನು ಭೇಟಿಯಾಗಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಭಾನುವಾರವೇ ಶಸ್ತ್ರಚಿಕಿತ್ಸೆಗೊಳಗಾಗಿರುವ ಅಮಿರಿಂದರ್ ಸಿಂಗ್ ಅವರ ಆರೋಗ್ಯದ ಬಗ್ಗೆ ಪ್ರಧಾನಿ ಮೋದಿ ದೂರವಾಣಿ ಕರೆ ಮೂಲಕ ವಿಚಾರಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ ಬಳಿಕ ಪಕ್ಷದ ನಾಯಕಿ ಸೋನಿಯಾ ಗಾಂಧಿ ಅವರಿಗೆ ಬರೆದ ಪತ್ರದಲ್ಲಿ ಸಿಂಗ್​ ಅವರು, ನಾಯಕತ್ವದಿಂದ ಮೂರು ಬಾರಿ ಅವಮಾನಕ್ಕೊಳಗಾಗಿದ್ದೇನೆ. ಇನ್ನು ಮುಂದೆ ಅದನ್ನು ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದರು. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net