ಇಬ್ಬರು ಪೆಡ್ಲರ್‌ಗಳ ಸೆರೆ

Drugs Free
Published on

ಬೆಂಗಳೂರು: ಮಾದಕ ದ್ರವ್ಯ ಮಾರಾಟ ಮಾಡುತ್ತಿದ್ದ ಇಬ್ಬರು ಪೆಡ್ಲರ್‌ಗಳನ್ನು ದೇವನಹಳ್ಳಿ ಪೊಲೀಸರು ಬಂಧಿಸಿ 80 ಲಕ್ಷ ರೂ. ಮೌಲ್ಯದ 850 ಗ್ರಾಂ ಕೊಕೇನ್ ಜಪ್ತಿ ಮಾಡಿದ್ದಾರೆ.

ತೆಲಂಗಾಣ ಮೂಲದ ಕೆ. ರಾಮುಗೌಡ (38) ಮತ್ತು ಅಬೂಬಕರ್ ಖುರೇಷಿ (34) ಬಂಧಿತರು. ದೇವನಹಳ್ಳಿಯ ಪ್ರಸನ್ನಹಳ್ಳಿ ರಸ್ತೆಯಲ್ಲಿ ಮಾದಕ ದ್ರವ್ಯ ಮಾರಾಟ ಮಾಡುತ್ತಿದ್ದ ಬಗ್ಗೆ ಸಿಕ್ಕ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟಿನ್ ಸೆಂಟರ್ ನಡೆಸುತ್ತಿದ್ದ ರಾಮುಗೌಡ ಮತ್ತು ರಿಯಲ್ ಎಸ್ಟೇಟ್ ಏಜೆಂಟ್ ಖುರೇಷಿ ಸುಲಭವಾಗಿ ಹಣ ಸಂಪಾದನೆ ಮಾಡುವ ಉದ್ದೇಶಕ್ಕೆ ವಿದೇಶಿ ಪ್ರಜೆಯಿಂದ ಕಡಿಮೆ ಬೆಲೆಗೆ ಕೊಕೇನ್ ಖರೀದಿಸಿದ್ದ. ಸಣ್ಣ ಸಣ್ಣ ಪ್ಯಾಕ್ ಮಾಡಿ ವ್ಯಸನಿಗಳಿಗೆ ಮಾರಾಟ ಮಾಡುತ್ತಿದ್ದರು. ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net