ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ

accident raichur
Published on

ಬೆಂಗಳೂರು: ವೇಗವಾಗಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಹೊಡೆದ ಪರಿಣಾಮ ಕಾರು ಪಲ್ಟಿ ಹೊಡೆದು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.

ಶುಕ್ರವಾರ ಬೆಳಗ್ಗೆ ೬.೩೦ ರ ವೇಳೆ ಏರ್‌ಪೋರ್ಟ್ ಕಡೆಯಿಂದ ನಗರದ ಕಡೆ ವೇಗವಾಗಿ ಬರುತ್ತಿದ್ದಾಗ ಮಾರ್ಗಮಧ್ಯೆ ಕೊಡಿಗೇಹಳ್ಳಿ ್ಲೈಓವರ್ ಮೇಲೆ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹೊಡೆದು ಪಲ್ಟಿಯಾಗಿದ್ದು, ಈ ವೇಳೆ ಚಾಲಕನ ತಲೆಗೆ ಗಂಭೀರ ಗಾಯವಾಗಿದ್ದು ಕೂಡಲೇ ಆತನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಹೆಬ್ಬಾಳ ಸಂಚಾರ ಪೊಲೀಸರು ಪರಿಶೀಲನೆ ನಡೆಸಿ ಕಾರನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಅಪಘಾತದ ತೀವ್ರಗೆ ಕಾರು ಸಂಪೂರ್ಣ ಜಖಂ ಆಗಿದೆ. ನಿದ್ರೆಯ ಮಂಪರಿನಲ್ಲಿ ಸ್ವಯಂ ಅಪಘಾತವಾಗಿರುವ ಸಾಧ್ಯತೆಯಿದೆ. ಸದ್ಯ ಚಾಲಕ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು ಆತನ ವಿವರ ತಿಳಿದು ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಬಂಧ ಹೆಬ್ಬಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net