ದೀಪಾವಳಿ ಹಬ್ಬದ ದಿನವೇ ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರ ಸಾವು

New Project(1)
Published on

ಚಿತ್ರದುರ್ಗ: ದೀಪಾವಳಿ ಹಬ್ಬದ ದಿನವೇ ಚಿತ್ರದುರ್ಗದ ಪ್ರವಾಸಿ ಮಂದಿರ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ.

ಚಳ್ಳಕೆರೆ ತಾಲೂಕಿನ ಕಾಮಸಮುದ್ರ ಗ್ರಾಮದ ಕಾರು ಚಾಲಕ ಮನು (21), ಚಿತ್ರದುರ್ಗ ತಾಲೂಕಿನ ಮೆದೇಹಳ್ಳಿ ಗ್ರಾಮದ ಹರೀಶ್ (25) ಮತ್ತು ಸಚಿನ್ (25)ಮೃತ ದುರ್ದೈವಿಗಳು.

ಇಂಡಿಕಾ ಕಾರಿನಲ್ಲಿ ಡ್ರೈವರ್​ ಸೇರಿ ಐವರು ಪ್ರಯಾಣಿಸುತ್ತಿದ್ದರು. ಸೋಮವಾರ ಮಧ್ಯರಾತ್ರಿ ಚಿತ್ರದುರ್ಗದ ಪ್ರವಾಸಿ ಮಂದಿರ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಡಿವೈಡರ್​ಗೆ ಡಿಕ್ಕಿಯಾಗಿದೆ. ಚಿತ್ರದುರ್ಗ ಸಂಚಾರಿ ಠಾಣೆ ಪೊಲೀಸರು ಮೃತದೇಹಗಳನ್ನು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ದೀಪಾವಳಿ ಹಬ್ಬದ ಸಡಗರದಲ್ಲಿ ಮಿಂದೇಳಬೇಕಿದ್ದ ಮನೆಯಲ್ಲಿ ಸೂತಕ ಆವರಿಸಿದ್ದು, ಹೆತ್ತವರ ಗೋಳಾಟ ನೋಡಲಾಗ್ತಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net