25 ಅಡಿ ಆಳದ ನಾಲೆಗೆ ಉರುಳಿ ಬಿದ್ದ ಕಾರು; ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Car
Published on

ಮಂಡ್ಯ: ರಸ್ತೆ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಕಾರು 25 ಅಡಿ ಆಳದ ನಾಲೆಗೆ ಉರುಳಿ ಬಿದ್ದಿರುವ ಘಟನೆ ಮಾಚಹಳ್ಳಿ ಗ್ರಾಮದಲ್ಲಿ ನಡೆದಿದೆ. ಈ ಬಗ್ಗೆ ಶಿವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಹುಬ್ಬಳ್ಳಿ | ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿಕೊಂಡು ಜೀವ ಕೊನೆಗೊಳಿಸಿದ ಸಹೋದರಿಯರು!

ನಾಲ್ವರು ಸದಸ್ಯರನ್ನೊಳಗೊಂಡ ಕುಟುಂಬ ಪಾಂಡವಪುರದ ಕಡೆ ಕ್ರೇಟಾ ಕಾರಿನಲ್ಲಿ ತೆರಳುತ್ತಿತ್ತು. ಈ ವೇಳೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು 25 ಅಡಿ ಆಳದ ನಾಲೆಗೆ ಬಿದ್ದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನಾಲೆಯಲ್ಲಿ ನೀರಿನ ಪ್ರಮಾಣ ಕಡಿಮೆ ಇದ್ದುದರಿಂದ ಜೀವಹಾನಿ ಸಂಭವಿಸಿಲ್ಲ. ಕಾರು ನಾಲೆಗೆ ಉರುಳಿ ಬಿದ್ದಿರುವ ಸುದ್ದಿ ತಿಳಿಯುತ್ತಿದ್ದಂತೆ ಮಾಚಹಳ್ಳಿ ಗ್ರಾಮಸ್ಥರು ಸ್ಥಳಕ್ಕೆ ಬಂದು ಕಾರಿನಲ್ಲಿದ್ದವರನ್ನು ರಕ್ಷಿಸಿದ್ದಾರೆ. ಬಳಿಕ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net