ನಾಲೆಗೆ ಬಿದ್ದ ಕಾರು: ಇಬ್ಬರ ದುರ್ಮರಣ

Karawar Car accident
Published on

ಕಾರವಾರ: ಅಂಕೋಲಾ-ಗೋವಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರೊಂದು ನಾಲೆಗೆ ಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಗಳವಾರ ನಸುಕಿನಲ್ಲಿ ದುರಂತ ಸಂಭವಿಸಿರುವ ಸಾಧ್ಯತೆ ಇದೆ.

ಮೃತರನ್ನು ಚಿಕ್ಕಮಗಳೂರು ಮೂಲದ ಕಿರಣ್(28) ಹಾಗೂ ರಾಕೇಶ ಸಿ.ಆರ್.(28) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಇನ್ನಿಬ್ಬರು ಗಾಯಗೊಂಡಿದ್ದು, ಕ್ರಿಮ್ಸ್ ಆಸ್ಪತ್ರೆಗೆ ಸೇರಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಅಂಕೋಲಾದಿಂದ ಗೋವಾಕ್ಕೆ ತೆರಳುವಾಗ ಲಂಡನ್ ಬ್ರಿಜ್ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ಕೋಣೆ ನಾಲಾಕ್ಕೆ ಬಿದ್ದಿದೆ. ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ, ಮಹಜರು ನಡೆಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net