ಕಾರು-ಲಾರಿ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವು, ಇಬ್ಬರ ಸ್ಥಿತಿ ಗಂಭೀರ

Car Accident
Published on

ವಿಜಯಪುರ: ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವಿಗೀಡಾಗಿ, ಇಬ್ಬರು ಗಾಯಗೊಂಡಿರುವ ಘಟನೆ ನಿಡಗುಂದಿ ತಾಲೂಕಿನ ಗೊಳಸಂಗಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.

ಹೊಸಪೇಟೆ ಮೂಲದ ರಾಜೇಶ(32), ಏಸುದಾಸ(32) ಹಾಗೂ ಭುಜಂಗರಾವ(38) ಮೃತ ದುರ್ದೈವಿಗಳು. ಹೊಸಪೇಟೆಯಿಂದ ವಿಜಯಪುರಕ್ಕೆ ಆಗಮಿಸುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಗಾಯಾಳುಗಳನ್ನು ವಿಜಯಪುರ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ.

ಅಪಘಾತ ಬೆನ್ನಲ್ಲೇ ಲಾರಿ ಬಿಟ್ಟು ಚಾಲಕ ಹಾಗೂ ಕ್ಲೀನರ್ ಪರಾರಿಯಾಗಿದ್ದಾರೆ. ಇನ್ನೊಂದೆಡೆ ಅಪಘಾತ ಸ್ಥಳದಲ್ಲಿ ಮೇಲ್ಸೇತುವೆ ನಿರ್ಮಿಸುವಂತೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿ, ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.

ಘಟನಾ ಸ್ಥಳಕ್ಕೆ ಕೂಡಗಿ ಎನ್​ಟಿಪಿಸಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net