ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಸ್ವಾಮೀಜಿ ಸೇರಿ ನಾಲ್ವರು ಸ್ಥಳದಲ್ಲೇ ದಾರುಣ ಸಾವು

Car Accident
Published on

ಧಾರವಾಡ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ವಾಮೀಜಿ ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಧಾರವಾಡ ತಾಲೂಕಿನ ಯರಿಕೊಪ್ಪ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಭಾನುವಾರ ನಡೆದಿದೆ.

ಅವಘಡದಲ್ಲಿ ಕುಂದಗೋಳ ಪಟ್ಟಣದ ಶಿವಾನಂದ ಮಠದ ಶ್ರೀ ಬಸವೇಶ್ವರ ಸ್ವಾಮೀಜಿ ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಶಿವಾನಂದ ಮಠದ ಶಾಲೆಯ ಗಣರಾಜ್ಯೋತ್ಸವ ಮುಗಿಸಿ ಧಾರವಾಡದಲ್ಲಿ ನಡೆಯುತ್ತಿದ್ದ ಭಕ್ತರೊಬ್ಬರ ಮದುವೆಗೆ ಆಗಮಿಸುತ್ತಿದ್ದಾಗ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಧಾರವಾಡ ಗ್ರಾಮೀಣ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net