ಕಾರು, ಲಾರಿ ಡಿಕ್ಕಿ; 3ಜನರು ಸ್ಥಳದಲ್ಲೇ ಸಾವು, ಮೂವರ ಸ್ಥಿತಿ ಗಂಭೀರ

ctd accident
Published on

ಚಿತ್ರದುರ್ಗ: ಚಿತ್ರದುರ್ಗ-ದಾವಣಗೆರೆ ರಾ.ಹೆ. ಚಿಕ್ಕಬೆನ್ನೂರು ಬಳಿ ಕಾರು, ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದುಅಪಘಾತದಲ್ಲಿ ಕಾರಿನಲ್ಲಿದ್ದ ,ಮೂವರು ಸ್ಥಳದಲ್ಲೇ ಸಾವು, ಮೂವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಚಲಿಸುತ್ತಿದ್ದ ಲಾರಿ ಟೈಯರ್ ಬ್ಲಾಸ್ಟ್ ಆಗಿದ್ದರಿಂದ ಹಿಂದಿನಿಂದ ಲಾರಿಗೆ ಕಾರು ಡಿಕ್ಕಿಯಾಗಿದೆ. ಟೈಯರ್ ಬ್ಲಾಸ್ ಆಗುತ್ತಿದ್ದಂತೆ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದೆ. ಕಾರಿನಲ್ಲಿದ್ದ 3ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆ ಆಶ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಚಿತ್ರದುರ್ಗದಿಂದ ದಾವಣಗೆರೆ ಕಡೆಗೆ ತೆರಳುತ್ತಿದ್ದ ಕಾರು- ಲಾರಿ ಆಗಿದೆ. ಅಪಘಾತದಲ್ಲಿ ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.ಸ್ಥಳಕ್ಕೆ ಭರಮಸಾಗರ ಠಾಣೆ ಪೊಲೀಸರು ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net