ಕಾರು-ಬೈಕ್ ಭೀಕರ ಅಪಘಾತ: ಸವಾರರಿಬ್ಬರೂ ಸ್ಥಳದಲ್ಲೇ ಸಾವು, ಚಾಲಕ ಕಾರು ಬಿಟ್ಟು ಪರಾರಿ..

Accident
Published on

ವಿಜಯಪುರ: ಕಾರು ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಈ ಅಪಘಾತ ಸಂಭವಿಸಿದೆ.

ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ತಾಲೂಕಿನ ಪಡಗಾನೂರ ಕ್ರಾಸ್ ಬಳಿ ಈ ಅಪಘಾತವಾಗಿದೆ. ಕಾರು ಮತ್ತೆ ಬೈಕ್​ ಮಧ್ಯೆ ಡಿಕ್ಕಿ ಸಂಭವಿಸಿದ್ದು, ಅಪಘಾತದಲ್ಲಿ ಬೈಕಸ್ ಸವಾರರಿಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಪಡಗಾನೂರ ತಾಂಡಾದ ಬಾಬು ಚೌವ್ಹಾಣ, ಅಶೋಕ ನಾಯಕ್ ಸಾವಿಗೀಡಾದವರು.

ಅಪಘಾತದ ತೀವ್ರತೆಗೆ ಇಬ್ಬರು ಮೃತಪಟ್ಟಿದ್ದು ತಿಳಿಯುತ್ತಿದ್ದಂತೆ ಚಾಲಕ ಕಾರನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ಸ್ಥಳಕ್ಕೆ ದೇವರಹಿಪ್ಪರಗಿ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net