Car Collided: ಟ್ರ್ಯಾಕ್ಟರ್‌ಗೆ ಕಾರು ಡಿಕ್ಕಿ; ನಾಲ್ವರು ಸ್ನೇಹಿತರು ದಾರುಣ ಸಾವು

Car Collided
Published on

ದೆಹಲಿ:  ನೋಯ್ಡಾದ ಸೆಕ್ಟರ್ 24 ಪೊಲೀಸ್ ಠಾಣೆ ವ್ಯಾಪ್ತಿಯ ಸೆಕ್ಟರ್ 11 ರ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕಾರಿನಲ್ಲಿ ( Car Collided ) ಪ್ರಯಾಣಿಸುತ್ತಿದ್ದ ನಾಲ್ವರು ಸಾವನ್ನಪ್ಪಿದ್ದು, ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ಮೋಹಿತ್, ವಿಶಾಲ್, ಹಿಮಾಂಶು ಅಲಿಯಾಸ್ ಬಿಟ್ಟು, ಮನೀಶ್ ಎಂಬುವರು ಮೃತಪಟ್ಟರೆ, ಕಾರಿನಲ್ಲಿ ಕುಳಿತಿದ್ದ ಉತ್ತಮ್ ಗಾಯಗೊಂಡಿದ್ದಾರೆ. ಉತ್ತಮ್ ಚಿಕಿತ್ಸೆ ಪಡೆಯುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ. ಭಾನುವಾರ ರಾತ್ರಿ 2 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು, ಮೃತರು ದೆಹಲಿಯ ನ್ಯೂ ಕೊಂಡ್ಲಿ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದಲ್ಲಿ ಗಾಯಗೊಂಡಿರುವ ದೆಹಲಿಯ ನ್ಯೂ ಕೊಂಡ್ಲಿ ನಿವಾಸಿ ಉತ್ತಮ್ ಅವರ ದೂರಿನ ಮೇರೆಗೆ ಸೆಕ್ಟರ್-24 ಪೊಲೀಸ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಪಘಾತ ಸಂಭವಿಸಿದ್ದು ಹೇಗೆ? ( Car Collided )

ಭಾನುವಾರ ರಾತ್ರಿ ತನ್ನ ಸ್ನೇಹಿತರಾದ ಮೋಹಿತ್, ವಿಶಾಲ್, ಮನೀಶ್ ಮತ್ತು ಹಿಮಾಂಶು ಅಲಿಯಾಸ್ ಬಿಟ್ಟು, ನೊಯ್ಡಾಗೆ ಬಂದು ದೆಹಲಿಗೆ ಹಿಂತಿರುಗುತ್ತಿದ್ದರು. ಹಿಮಾಂಶು ಕಾರನ್ನು ಚಲಾಯಿಸುತ್ತಿದ್ದರು. ಸೆಕ್ಟರ್ -11 ರ ಹೆಚ್ ಬ್ಲಾಕ್‌ನಲ್ಲಿ ದಾರಿಯಲ್ಲಿ ಟ್ರ್ಯಾಕ್ಟರ್ ಚಾಲಕ  ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಘಟನೆಯಲ್ಲಿ ಕಾರಿನಲ್ಲಿದ್ದ ಎಲ್ಲರಿಗೂ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ನಾಲ್ವರು ಸ್ನೇಹಿತರು ಸಾವನ್ನಪ್ಪಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಟ್ರ್ಯಾಕ್ಟರ್ ಚಾಲಕನ ನಿರ್ಲಕ್ಷ್ಯ ಆರೋಪವಿದೆ.

.ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಎಡಿಸಿಪಿ ತಿಳಿಸಿದ್ದಾರೆ. ಘಟನೆಯ ನಂತರ ಟ್ರ್ಯಾಕ್ಟರ್ ಚಾಲಕ ತಲೆಮರೆಸಿಕೊಂಡಿದ್ದು, ಆತನಿಗಾಗಿ ಶೋಧ ನಡೆಸಲಾಗುತ್ತಿದೆ. ಟ್ರ್ಯಾಕ್ಟರ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net