

ಬೆಳಗಾವಿ: ಕಾರು ಮರಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸುವಂಥ ಪ್ರಕರಣಗಳು ಹೆಚ್ಚಾಗಿದ್ದು, ಇದೀಗ ಇನ್ನೊಂದು ಕಾರು ಮರಕ್ಕೆ ಡಿಕ್ಕಿ ಹೊಡೆದಿದ್ದು, ಒಬ್ಬರು ಸ್ಥಳದಲ್ಲೇ ಮರಣ ಹೊಂದಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದೆ.
ಬೆಳಗಾವಿ ತಾಲೂಕಿನ ಉಕ್ಕಡ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಮಹಾರಾಷ್ಟ್ರದ ಮಿರಜ್ ನಿವಾಸಿ ಸುಲ್ತಾನ್ ಖಾಜಿ (30) ಸಾವಿಗೀಡಾದವರು. ಕಾರು ಮಹಾರಾಷ್ಟ್ರದ ಮಿರಜ್‌ನಿಂದ ಬೆಳಗಾವಿಗೆ ಸಾಗುತ್ತಿತ್ತು.
ಸುಲ್ತಾನ್ ಖಾಜಿ ಕೆಲಸದ ನಿಮಿತ್ತ ಬೆಳಗಾವಿಗೆ ಬರುತ್ತಿದ್ದಾಗ ಉಕ್ಕಡ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು, ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಅವರು ಸ್ಥಳದಲ್ಲೇ ಮರಣ ಹೊಂದಿದ್ದಾರೆ. ಕಾಕತಿ ಠಾಣೆ ಪೊಲೀಸರ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.