ಚಲಿಸುವ ಕಾರಿನಲ್ಲಿ ಇಬ್ಬರು ಪುರುಷರೊಂದಿಗೆ ಮಹಿಳೆ ರೊಮ್ಯಾನ್ಸ್​; ಆ್ಯಕ್ಸಿಡೆಂಟ್​ ಆದ್ರು ನಿಲ್ಲಲಿಲ್ಲ ಇವ್ರ ಸರಸ-ಸಲ್ಲಾಪ

Car Accident
Published on

ಕಾನ್ಪುರ: ವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿ ಹೊಡೆದಿರುವ ಘಟನೆ ಉತ್ತರಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಆದರೆ, ಅಪಘಾತ ನಡೆದಾಗ ಸ್ಥಳೀಯರು ಗಾಯಾಳುಗಳ ರಕ್ಷಣೆಗೆ ತೆರಳಿದ್ದು, ಈ ವೇಳೆ ಕಾರಿನೊಳಗಿನ ದೃಶ್ಯ ಕಂಡು ದಂಗಾಗಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದಾಗ ಸ್ಥಳೀಯರು ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ಮುಂದಾಗಿದ್ದಾರೆ. ಈ ವೇಳೆ ಡೋರ್​ ತೆಗೆದಾಗ ಇಬ್ಬರು ಪುರುಷರೊಂದಿಗೆ ಮಹಿಳೆಯೊಬ್ಬರು ಲೈಂಗಿಕ ಕ್ರಿಯೆ ನಡೆಸುತ್ತಿರುವುದನ್ನು ಕಂಡು ಸಾರ್ವಜನಿಕರು ದಿಗ್ಬ್ರಮೆಗೊಂಡಿದ್ದಾರೆ. ಇದಲ್ಲದೆ ಕಾರಿನಲ್ಲಿ ನಾಲ್ವರು ಮಕ್ಕಳು ಕೂಡ ಇರುವುದನ್ನು ವೈರಲ್​ ಆಗಿರುವ ವಿಡಿಯೋದಲ್ಲಿ ನೋಡಬಹುದಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಶನಿವಾರ ಜುಲೈ 27ರಂದು ಘಟನೆ ನಡೆದಿದ್ದು, ಕಾನ್ಪುರದ ಜಜ್ಮೌ ಪೊಲೀಸ್ ಠಾಣೆ ವ್ಯಾಪ್ತಿಯ ಜೆಕೆ ಚೌರಾಹಾ ಬಳಿ ಈ ಘಟನೆ ನಡೆದಿದೆ. ಮಕ್ಕಳನ್ನು ಹೊರತುಪಡಿಸಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಮದ್ಯ ಸೇವಿಸಿದ್ದರು. ಇದಲ್ಲದೆ ಕಾರಿನಲ್ಲಿ ಮಹಿಳೆಯೊಬ್ಬರು ಇಬ್ಬರು ಪುರುಷರೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿದ್ದದ್ದು ಕಂಡು ಬಂದಿದೆ.

ಅಪಘಾತದಲ್ಲಿ ಮಹಿಳೆ ಗಾಯಗೊಂಡಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. . ಕಾರಿನೊಳಗೆ ಮದ್ಯದ ಬಾಟಲಿಗಳು ಮತ್ತು ಇತರ ಆಕ್ಷೇಪಾರ್ಹ ವಸ್ತುಗಳನ್ನು ಸಹ ಪತ್ತೆಯಾಗಿದ್ದು, ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಕೂಡ ಜಖಂಗೊಂಡಿದೆ. ಕಾರಿನಲ್ಲಿದ್ದ ಯುವಕರು ಹಾಗೂ ಮಕ್ಕಳನ್ನು ವಶಕ್ಕೆ ಪಡೆಯಲಾಗಿದೆ. ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net