Road Accident | ಕ್ಯಾಂಟರ್​ಗೆ ಕಾರು ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು

car accident
Published on

ಮುದ್ದೇಬಿಹಾಳ: ಹೆದ್ದಾರಿಯಲ್ಲಿ ನಿಂತಿದ್ದ ಕ್ಯಾಂಟರಿಗೆ ಕಾರೊಂದು ರಭಸವಾಗಿ ಡಿಕ್ಕಿ (Accident) ಹೊಡೆದ ಪರಿಣಾಮ ಮುದ್ದೇಬಿಹಾಳ ತಾಲೂಕು ಬಿದರಕುಂದಿ ಗ್ರಾಮದ ಪ್ರಥಮ ದರ್ಜೆ ಗುತ್ತಿಗೆದಾರ ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಹುನಗುಂದ-ತಾಳಿಕೋಟೆ ರಾಜ್ಯ ಹೆದ್ದಾರಿಯ ಧನ್ನೂರ ಟೋಲ್ ಹತ್ತಿರ ಬೆಳಗಿನ ಜಾವ ಸಂಭವಿಸಿದೆ.

ಮೃತರನ್ನು ಬಿದರಕುಂದಿಯ ಗುತ್ತಿಗೆದಾರ ಲಕ್ಷ್ಮಣ ವಡ್ಡರ, ಬೈಲಪ್ಪ ಬಿರಾದಾರ, ಮುದ್ದೇಬಿಹಾಳದ ರಾಮಣ್ಣ ನಾಯಕ ಮಕ್ಕಳ ಮತ್ತು ಕಾರು ಚಾಲಕ ಗುಡ್ನಾಳದ ಮಹ್ಮದರಫೀಕ ಎಂದು ಗುರುತಿಸಲಾಗಿದೆ.

ಘಟನಾ ಸ್ಥಳವು ಬಾಗಲಕೋಟ ಜಿಲ್ಲೆ ಹುನಗುಂದ ಪೊಲೀಸ್ ಠಾಣೆ ವ್ಯಾಪ್ತಿಗೆ ಸೇರಿದ್ದರಿಂದ ಅಲ್ಲಿನ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಕೊಂಡಿದ್ದಾರೆ. ಇವರೆಲ್ಕರೂ ಹೊಸಪೇಟೆ ಹತ್ತಿರ ಇರುವ ದೇವಸ್ಥಾನವೊಂದಕ್ಕೆ ಹೋಗಿ ಮರಳಿ ಬರುವಾಗ ಈ ದುರಂತ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net